
ಧಾರವಾಡ, 29 ಮಾರ್ಚ್ (ಹಿ.ಸ.):
ಆ್ಯಂಕರ್:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಧಾರವಾಡ ಪ್ರಾದೇಶಿಕ ಕೇಂದ್ರವು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 2001-02 ರಿಂದ 2014-15ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್ಸಿ, ಎಲ್ಲಾ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಲ್ಲಾ ಎಂ.ಎಸ್ಸಿ, ಎಲ್.ಎಲ್.ಎಂ, ಎಂ.ಲಿಬ್.ಐ.ಎಸ್ಸಿ, ಬಿ.ಇಡ್, ಎಂ.ಇಡ್, ಬಿ.ಇಡ್ (ವಿಶೇಷ) ಕೋರ್ಸ್ ಗಳಿಗೆ ಪ್ರವೇಶಾತಿ ಪಡೆದು ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ /ತಮ್ಮ ವೈಯಕ್ತಿಕ ಮತ್ತು ಅನಾರೋಗ್ಯ ಕಾರಣಗಳಿಂದಾಗಿ ಹಾಗೂ ಕೆಲಸದ ಒತ್ತಡಗಳಿಂದ ಪರೀಕ್ಷೆಯನ್ನು ತೆಗೆದುಕೊಂಡಿಲ್ಲದಂತಹ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಪದವಿಯನ್ನು ಪಡೆದುಕೊಳ್ಳಲು ಬಾಕಿ ಇರುವ ವಿಷಯಗಳಿಗೆ ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ವಿವಿಯ ಅಧಿಕೃತ ವೆಬ್ ಸೈಟ್: www.ksoumysuru.ac.in ನ ಮೂಲಕ ಪರೀಕ್ಷಾ ಶುಲ್ಕವನ್ನು ಕಡ್ಡಾಯಾಗಿ ಅಂತರ್ಜಾಲದ ಮೂಲಕ ಮಾತ್ರ ಪಾವತಿಸಬೇಕು, ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೆ ಮಾರ್ಚ್ 31 ಕೊನೆಯ ದಿನ ಹಾಗೂ 200 ರೂ. ದಂಡ ಶುಲ್ಕದೊಂದಿಗೆ ಏಪ್ರಿಲ್ 06 ಕೊನೆಯ ದಿನ. ಪರೀಕ್ಷಾ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಪ್ರಾದೇಶಿಕ ಕೇಂದ್ರ, ಅಮರಗೋಳ, 2ನೇ ಹಂತ, ಜಡ್ಜ್ ಕಾಲೋನಿ ಹತ್ತಿರ, ನವನಗರ ಹುಬ್ಬಳ್ಳಿ ಅಥವಾ ದೂರವಾಣಿ: 0836-2441199/7019314679 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa