ಹಳಿಯಾಳ ತಾಲೂಕಿನಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ
ಹಳಿಯಾಳ, 29 ಮಾರ್ಚ್ (ಹಿ.ಸ.): ಆ್ಯಂಕರ್:ಜಿಲ್ಲಾ ಪಂಚಾಯತ್ ಉತ್ತರ ಕನ್ನಡದ ಹಳಿಯಾಳ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಶಾಸಕರಾದ ಆರ್.ವಿ. ದೇಶಪಾಂಡೆ ಭೂಮಿಪೂಜೆ ನೆರವೇರಿಸಿ ಶಂಕುಸ್ಥಾಪನೆ ಮಾಡಿದರು. 2024-25ನೇ ಸಾಲಿನ ಲೆಕ್ಕ ಶೀರ್ಷಿಕೆ 5054ರಡಿ, ರಾಜ್ಯದಲ್ಲಿ ಸುರಿದ ಭಾರೀ ಮಳೆಯ ಪರ
ಭೂಮಿ ಪೂಜೆ


ಹಳಿಯಾಳ, 29 ಮಾರ್ಚ್ (ಹಿ.ಸ.):

ಆ್ಯಂಕರ್:ಜಿಲ್ಲಾ ಪಂಚಾಯತ್ ಉತ್ತರ ಕನ್ನಡದ ಹಳಿಯಾಳ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಶಾಸಕರಾದ ಆರ್.ವಿ. ದೇಶಪಾಂಡೆ ಭೂಮಿಪೂಜೆ ನೆರವೇರಿಸಿ ಶಂಕುಸ್ಥಾಪನೆ ಮಾಡಿದರು.

2024-25ನೇ ಸಾಲಿನ ಲೆಕ್ಕ ಶೀರ್ಷಿಕೆ 5054ರಡಿ, ರಾಜ್ಯದಲ್ಲಿ ಸುರಿದ ಭಾರೀ ಮಳೆಯ ಪರಿಣಾಮದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆಗಳು, ಸೇತುವೆಗಳು ಮತ್ತು ಚರಂಡಿಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಜೊತೆಗೆ ಜನಗಾ ಗ್ರಾಮದಿಂದ ಬಸವಳ್ಳಿ ಗ್ರಾಮದವರೆಗೆ ಹೊಸ ರಸ್ತೆ ನಿರ್ಮಾಣಕ್ಕೂ ಭೂಮಿಪೂಜೆ ನೆರವೇರಿಸಲಾಯಿತು.

ಈ ಯೋಜನೆಗಳು ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದರ ಜೊತೆಗೆ, ಜನಸಾಮಾನ್ಯರ ಸಂಚಾರಕ್ಕೆ ಹೆಚ್ಚಿನ ಅನುಕೂಲ ಒದಗಿಸಲಿವೆ ಎಂದು ತಿಳಿಸಲಾಯಿತು. ವಿಶೇಷವಾಗಿ ಮಳೆಗಾಲದಲ್ಲಿ ಉಂಟಾಗುವ ತೊಂದರೆಗಳನ್ನು ಕಡಿಮೆ ಮಾಡುವಲ್ಲಿ ಈ ಕಾಮಗಾರಿಗಳು ಪ್ರಮುಖ ಪಾತ್ರ ವಹಿಸಲಿವೆ.

ಕಾರ್ಯಕ್ರಮದಲ್ಲಿ ಬಿಸಿಸಿ ಅಧ್ಯಕ್ಷರು, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಶುಭಾಶಯ ಕೋರಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande