ಡಿ.ಆರ್. ಪಾಟೀಲ ಸಂಯಮ ಪ್ರಶಸ್ತಿಗೆ ಭಾಜನ
ಗದಗ, 29 ಮಾರ್ಚ್ (ಹಿ.ಸ.) ಆ್ಯಂಕರ್:- ಬೆಂಗಳೂರಿನ ಕುಮಾರ ಪಾರ್ಕನ ಗಾಂಧೀ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಮಾ. 31ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಂಡಿರುವ 2023, 2024 ಹಾಗೂ 2025ನೇ ಸಾಲಿನ “ಸಂಯಮ ಪ್ರಶಸ್ತಿ” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ
ಫೋಟೋ


ಗದಗ, 29 ಮಾರ್ಚ್ (ಹಿ.ಸ.)

ಆ್ಯಂಕರ್:- ಬೆಂಗಳೂರಿನ ಕುಮಾರ ಪಾರ್ಕನ ಗಾಂಧೀ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಮಾ. 31ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಂಡಿರುವ 2023, 2024 ಹಾಗೂ 2025ನೇ ಸಾಲಿನ “ಸಂಯಮ ಪ್ರಶಸ್ತಿ” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಶಾಸಕರು, ಕರ್ನಾಟಕ ರಾಜ್ಯ ಯೋಜನೆ ಹಾಗೂ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ಹಾಗೂ ಸಂತ ರಾಜಕಾರಣಿ ಎಂದೇ ಖ್ಯಾತರಾಗಿರುವ ಡಿ.ಆರ್. ಪಾಟೀಲ ಅವರಿಗೆ 2023ನೇ ಸಾಲಿನ “ಸಂಯಮ ಪ್ರಶಸ್ತಿ” ಪ್ರಶಸ್ತಿ ಪ್ರದಾನ ಜರುಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಯಮ ಪ್ರಶಸ್ತಿ ಪ್ರದಾನ ಮಾಡಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮ್ನ, ಶೋಭಾ ಕರಂದ್ಲಾಜೆ ಅವರು ಘನ ಉಪಸ್ಥಿತಿ ವಹಿಸಲಿದ್ದು, ಶಾಸಕ ರಿಜ್ವಾನ ಅರ್ಷದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ, ಪ್ರಿಯಾಂಕ್ ಖರ್ಗೆ, ಎಸ್.ಎಸ್. ಬೋಸರಾಜು, ಡಾ. ಶರಣಪ್ರಕಾಶ ಪಾಟೀಲ ಪಾಲ್ಗೊಳ್ಳುವರು.

ಇದೇ ವೇಳೆ 2024ನೇ ಸಾಲಿನ ಸಂಯಮ ಪ್ರಶಸ್ತಿ ಬಿ.ಆರ್, ಪಾಟೀಲ, 2025ನೇ ಸಾಲಿನ ಸಂಯಮ ಪ್ರಶಸ್ತಿ ಡಾ ವುಡೇಪಿ ಕೃಷ್ಣಾ ಅವರಿಗೆ ಪ್ರದಾನ ಜರುಗಲಿದೆ. ಡಿ.ಆರ್. ಪಾಟೀಲ ಅಭಿಮಾನಿ ಬಳಗದವರು ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂದು ವಾಸಣ್ಣ ಕುರುಡುಗಿ, ಗುರಣ್ಣ ಬಳಗಾನೂರ, ವಿದ್ಯಾಧರ ದೊಡ್ಡಮನಿ ಹಾಗೂ ಜೆ.ಕೆ. ಜಮಾದಾರ ಹಾಗೂ ಇತರರು ವಿನಂತಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande