ಬಾಗಲಕೋಟೆಯಲ್ಲಿ ಲಿಂಗಾಯತ ಮುಖಂಡರ ಸಭೆ: ಕಾಂಗ್ರೆಸ್ ಪರ ಮತಯಾಚನೆ
ಬಾಗಲಕೋಟೆ, 29 ಮಾರ್ಚ್ (ಹಿ.ಸ.): ಆ್ಯಂಕರ್:ಬಾಗಲಕೋಟೆ ನವನಗರ ಸಮೀಪದ ಸೆಕ್ಟರ್ ನಂ. 27ರ ಆರ್ಯಭಟ ಶಾಲೆ ಹತ್ತಿರ ಶ್ರೀ ಶರಣಪ್ಪ ಕುದರಿಕನ್ನೂರ ಅವರ ನಿವಾಸದಲ್ಲಿ ಸಚಿವ ಎಂ.ಬಿ. ಪಾಟೀಲ ಅವರ ನೇತೃತ್ವದಲ್ಲಿ ಲಿಂಗಾಯತ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಬಾಗಲಕೋಟೆ ಜಿಲ್ಲೆ ಹಾಗೂ ನಗರಕ್ಕೆ ಕಾಂಗ್ರೆಸ್ ಪಕ್
Meeting


ಬಾಗಲಕೋಟೆ, 29 ಮಾರ್ಚ್ (ಹಿ.ಸ.):

ಆ್ಯಂಕರ್:ಬಾಗಲಕೋಟೆ ನವನಗರ ಸಮೀಪದ ಸೆಕ್ಟರ್ ನಂ. 27ರ ಆರ್ಯಭಟ ಶಾಲೆ ಹತ್ತಿರ ಶ್ರೀ ಶರಣಪ್ಪ ಕುದರಿಕನ್ನೂರ ಅವರ ನಿವಾಸದಲ್ಲಿ ಸಚಿವ ಎಂ.ಬಿ. ಪಾಟೀಲ ಅವರ ನೇತೃತ್ವದಲ್ಲಿ ಲಿಂಗಾಯತ ಮುಖಂಡರ ಸಭೆ ನಡೆಯಿತು.

ಸಭೆಯಲ್ಲಿ ಬಾಗಲಕೋಟೆ ಜಿಲ್ಲೆ ಹಾಗೂ ನಗರಕ್ಕೆ ಕಾಂಗ್ರೆಸ್ ಪಕ್ಷ ನೀಡಿರುವ ಕೊಡುಗೆಗಳು ಹಾಗೂ ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಜನಪರ ಯೋಜನೆಗಳ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಮತಯಾಚನೆ ನಡೆಸಿ, ಹೆಚ್ಚಿನ ಬಹುಮತದಿಂದ ಗೆಲ್ಲಿಸುವಂತೆ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಲಾಯಿತು.

ಸಭೆಯಲ್ಲಿ ಸಿದ್ದಾರ್ಥ್ ಚಿಂಚಲಿ, ಮುತ್ತು ಕಮತಗಿ, ಸಂತೋಷ ಒಕ್ಕರಾಣಿ, ಗೋವಿಂದ ಬಳ್ಳಾರಿ ಸೇರಿದಂತೆ ಅನೇಕ ಲಿಂಗಾಯತ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande