ಹೊಸಬೆಳವನೂರು ತಾಂಡದಲ್ಲಿ ಕಾಂಗ್ರೆಸ್ ಪರ ಸಂಸದೆ ಪ್ರಭಾ ಮಲ್ಲಿಕಾರ್ಜುನ ಪ್ರಚಾರ
ದಾವಣಗೆರೆ, 29 ಮಾರ್ಚ್ (ಹಿ.ಸ.): ಆ್ಯಂಕರ್:ದಾವಣಗೆರೆ ತಾಲೂಕಿನ ಹೊಸಬೆಳವನೂರು ತಾಂಡದಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ವ್ಯಾಪಕ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರೊಂದಿಗೆ ನೇರವಾಗಿ ಸಂವಾದ ನಡೆಸಿದ ಅವರು, ಜನರ ಅಭಿಪ್ರಾಯಗಳನ್ನು ಆ
Prabha


ದಾವಣಗೆರೆ, 29 ಮಾರ್ಚ್ (ಹಿ.ಸ.):

ಆ್ಯಂಕರ್:ದಾವಣಗೆರೆ ತಾಲೂಕಿನ ಹೊಸಬೆಳವನೂರು ತಾಂಡದಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ವ್ಯಾಪಕ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರೊಂದಿಗೆ ನೇರವಾಗಿ ಸಂವಾದ ನಡೆಸಿದ ಅವರು, ಜನರ ಅಭಿಪ್ರಾಯಗಳನ್ನು ಆಲಿಸಿ ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚಿಸಿದರು. ಜನರೊಂದಿಗೆ ಹತ್ತಿರದ ಸಂಪರ್ಕ ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬದ್ಧತೆಯನ್ನು ಮತ್ತೊಮ್ಮೆ ಒತ್ತಿ ಹೇಳಿದರು.

ಶಾಮನೂರು ಶಿವಶಂಕರಪ್ಪ ಅವರ ಮೇಲೆ ಗ್ರಾಮಸ್ಥರು ಹೊಂದಿರುವ ಗೌರವ ಮತ್ತು ಪೂಜನೀಯ ಭಾವನೆ ಗಮನಿಸಿದ ಕ್ಷಣ ಹೆಮ್ಮೆಯಾಯಿತು ಎಂದು ಪ್ರಭಾ ಮಲ್ಲಿಕಾರ್ಜುನ ಹೇಳಿದರು. ಅವರ ಸೇವಾ ಪರಂಪರೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಸಮರ್ಥ್ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande