ಮಣಿಪುರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ : ಉಗ್ರರು, ಮಾದಕ ದ್ರವ್ಯ ಸಾಗಣೆದಾರರ ಬಂಧನ
ಇಂಫಾಲ, 29 ಮಾರ್ಚ್ (ಹಿ.ಸ.): ಆ್ಯಂಕರ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರ ಸಂಯುಕ್ತ ಕಾರ್ಯಾಚರಣೆಗಳು ತೀವ್ರಗೊಳ್ಳುತ್ತಿದ್ದು, ಉಗ್ರ ಚಟುವಟಿಕೆಗಳ ಜೊತೆಗೆ ಮಾದಕ ವಸ್ತು ಕಳ್ಳಸಾಗಣೆಯ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತೀಚಿನ ಕಾರ್ಯಾಚರಣೆಗಳಲ್ಲಿ ಇಬ್ಬರು
Arrest


ಇಂಫಾಲ, 29 ಮಾರ್ಚ್ (ಹಿ.ಸ.):

ಆ್ಯಂಕರ್:

ಈಶಾನ್ಯ ರಾಜ್ಯ ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರ ಸಂಯುಕ್ತ ಕಾರ್ಯಾಚರಣೆಗಳು ತೀವ್ರಗೊಳ್ಳುತ್ತಿದ್ದು, ಉಗ್ರ ಚಟುವಟಿಕೆಗಳ ಜೊತೆಗೆ ಮಾದಕ ವಸ್ತು ಕಳ್ಳಸಾಗಣೆಯ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತೀಚಿನ ಕಾರ್ಯಾಚರಣೆಗಳಲ್ಲಿ ಇಬ್ಬರು ಉಗ್ರ ಸಂಘಟನೆಗಳ ಕಾರ್ಯಕರ್ತರು ಹಾಗೂ ಇಬ್ಬರು ವಾಹನ ಚಾಲಕರನ್ನು ಬಂಧಿಸಿ, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಣಿಪುರ ಪೊಲಿಸ್ ಪ್ರಧಾನ ಕಚೇರಿ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ನಿಷೇಧಿತ ಯುನೈಟೆಡ್ ಪೀಪಲ್ಸ್ ಪಾರ್ಟಿ ಆಫ್ ಕಾಂಗ್ಲೀಪಾಕ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಖರಿಬಮ್ ಬೊಯ್ನಾವೊ ಮೈಟೈ (32) ಅವರನ್ನು ಮಾರ್ಚ್ 28ರಂದು ಇಂಫಾಲ್ ಪೂರ್ವ ಜಿಲ್ಲೆಯ ಸಗೋಲ್ಮಾಂಗ್ ವ್ಯಾಪ್ತಿಯ ನಿವಾಸದಿಂದ ಬಂಧಿಸಲಾಗಿದೆ.

ಅದೇ ದಿನ, ಮತ್ತೊಂದು ಕಾರ್ಯಾಚರಣೆಯಲ್ಲಿ ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ಮಣಿಪುರಗೆ ಸಂಬಂಧಿಸಿದ ಕ್ರಾಂತಿಕಾರಿ ಪೀಪಲ್ಸ್ ಫ್ರಂಟ್ ಸಂಘಟನೆಯ ಕಾರ್ಯಕರ್ತ ಥೋಕ್‌ಚೋಮ್ ಖೇಲ್ಜಿತ್ ಮೈಟೈ (48) ಅವರನ್ನು ಪೊರೊಂಪತ್ ಪೊಲೀಸ್ ಠಾಣೆ ವ್ಯಾಪ್ತಿಯ ಹಪ್ತಾ ಕಾಂಗ್ಜಿಬಂಗ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಅವರ ಬಳಿಯಿಂದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಇನ್ನೊಂದೆಡೆ, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಚುರಾಚಂದ್‌ಪುರ ಜಿಲ್ಲೆಯ ನಾಗಥಾಲ್ ಮೈದಾನ ಪ್ರದೇಶದಲ್ಲಿ ನಡೆಸಿದ ತಪಾಸಣೆಯಲ್ಲಿ ಎರಡು ವಾಹನಗಳನ್ನು ತಡೆದು ಪರಿಶೀಲಿಸಿದಾಗ, ಕೋಟ್ಯಂತರ ರೂಪಾಯಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದೆ. ಡಿಐ ಟಾಟಾ ಮತ್ತು ಸ್ಕಾರ್ಪಿಯೋ ವಾಹನಗಳಿಂದ ಒಟ್ಟು 207 ಸೋಪ್ ಬಾಕ್ಸ್‌ಗಳಲ್ಲಿ ಅಡಗಿಸಿದ್ದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪೌಮುವಾನ್ಲಿಯನ್ ತುಂಗ್ನುಂಗ್ (23) ಮತ್ತು ಲಿಯಾನ್‌ಮಿಂಥಾಂಗ್ ನೆಹ್ಸಿಯಾಲ್ (26) ಎಂಬ ಚಾಲಕರನ್ನು ಬಂಧಿಸಲಾಗಿದೆ.

ಇದಲ್ಲದೆ, ಮಾರ್ಚ್ 27ರಂದು ಜಿರಿಬಮ್ ಜಿಲ್ಲೆಯ ದಿಬಾಂಗ್ ಅವಾಂಗ್ ಲೈಕೈ ಪ್ರದೇಶದಲ್ಲಿ ಮತ್ತೊಬ್ಬ ಶಂಕಿತನನ್ನು ಬಂಧಿಸಲಾಗಿದ್ದು, ಆತನಿಂದ ಎರಡು ಹ್ಯಾಂಡ್ ಗ್ರೆನೇಡ್‌ಗಳು ಹಾಗೂ ವಿವಿಧ ಕ್ಯಾಲಿಬರ್‌ನ ಐದು ಸುತ್ತಿನ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ಎಲ್ಲಾ ಪ್ರಕರಣಗಳ ಕುರಿತು ತನಿಖೆಯನ್ನು ಮುಂದುವರೆಸಿದ್ದು, ರಾಜ್ಯದಲ್ಲಿ ಉಗ್ರ ಚಟುವಟಿಕೆಗಳು ಮತ್ತು ಮಾದಕ ವಸ್ತು ಸಾಗಣೆ ವಿರುದ್ಧ ಕಾರ್ಯಾಚರಣೆಗಳನ್ನು ಇನ್ನಷ್ಟು ಬಲಪಡಿಸಲಾಗುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande