ಗುಜರಾತನ ಮಾಧವಪುರ ಮೇಳಕ್ಕೆ ಪ್ರಧಾನಿ ಶುಭಾಶಯ
ನವದೆಹಲಿ, 29 ಮಾರ್ಚ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮಾಧವಪುರ ಮೇಳದ ಸಂದರ್ಭದಲ್ಲಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಈ ಮೇಳವು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಿಂಬಿಸುವುದರ ಜೊತೆಗೆ ಗುಜರಾತ್ ಮತ್ತು ಈಶಾನ್ಯ ರಾಜ್ಯಗಳ ನಡುವಿನ ಸಾಂಸ್ಕ
Pm


ನವದೆಹಲಿ, 29 ಮಾರ್ಚ್ (ಹಿ.ಸ.):

ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮಾಧವಪುರ ಮೇಳದ ಸಂದರ್ಭದಲ್ಲಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಈ ಮೇಳವು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಿಂಬಿಸುವುದರ ಜೊತೆಗೆ ಗುಜರಾತ್ ಮತ್ತು ಈಶಾನ್ಯ ರಾಜ್ಯಗಳ ನಡುವಿನ ಸಾಂಸ್ಕೃತಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಗುಜರಾತ್‌ನ ಪೋರಬಂದರನಲ್ಲಿ ನಡೆಯುತ್ತಿರುವ ಈ ಮೇಳದ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ, “ಈ ರೋಮಾಂಚಕ ಉತ್ಸವವು ನಮ್ಮ ವೈವಿಧ್ಯಮಯ ಸಂಸ್ಕೃತಿಯ ಸೌಂದರ್ಯವನ್ನು ತೋರಿಸುತ್ತದೆ ಮತ್ತು ದೇಶದ ವಿವಿಧ ಭಾಗಗಳ ನಡುವಿನ ಅವಿನಾಭಾವ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ” ಎಂದು ಹೇಳಿದ್ದಾರೆ.

ಅವರು ಮುಂದುವರೆದು, “ಈ ಹಬ್ಬವು ವಿವಿಧ ಸಂಪ್ರದಾಯಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ‘ಏಕ್ ಭಾರತ್, ಶ್ರೇಷ್ಠ ಭಾರತ್’ ಎಂಬ ತತ್ವದ ನೈಜ ರೂಪವಾಗಿದೆ. ಹೆಚ್ಚಿನ ಜನರು ಈ ಮೇಳದಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande