ಲಗ್ಗೆರೆಯಲ್ಲಿ 208 ಗರ್ಭಿಣಿಯರಿಗೆ ಸೀಮಂತ: ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
ಬೆಂಗಳೂರು, 29 ಮಾರ್ಚ್ (ಹಿ.ಸ.): ಆ್ಯಂಕರ್: ಬೆಂಗಳೂರು ಲಗ್ಗೆರೆಯ ಬಸವೇಶ್ವರ ಭವನದಲ್ಲಿ ಕಾಂಗ್ರೆಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಿದ್ದ 208 ಮಾತೆಯರ ಸೀಮಂತ ಕಾರ್ಯಕ್ರಮ, ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಸಚಿವೆ ಲಕ್ಷ್ಮ
Seemanth


ಬೆಂಗಳೂರು, 29 ಮಾರ್ಚ್ (ಹಿ.ಸ.):

ಆ್ಯಂಕರ್:

ಬೆಂಗಳೂರು ಲಗ್ಗೆರೆಯ ಬಸವೇಶ್ವರ ಭವನದಲ್ಲಿ ಕಾಂಗ್ರೆಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಿದ್ದ 208 ಮಾತೆಯರ ಸೀಮಂತ ಕಾರ್ಯಕ್ರಮ, ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ತಾಯಿ ಎಂದರೆ ಪ್ರೀತಿ, ತ್ಯಾಗ ಮತ್ತು ಕಾಳಜಿಯ ಜೀವಂತ ರೂಪ” ಎಂದು ಹೇಳಿ, ತಾಯ್ತನದ ಸಂಭ್ರಮದಲ್ಲಿರುವ ಮಹಿಳೆಯರಿಗೆ ಶುಭಾಶಯ ಕೋರಿದರು. ಸಮಾಜದಲ್ಲಿ ತಾಯಿಯ ಪಾತ್ರ ಅಪಾರವಾಗಿದ್ದು, ಇಂತಹ ಕಾರ್ಯಕ್ರಮಗಳು ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬುವಲ್ಲಿ ಸಹಕಾರಿ ಎಂದರು.

ಈ ಸಂದರ್ಭದಲ್ಲಿ ವಿಕಲಚೇತನರಿಗೆ ಉಚಿತ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು. ಆರೋಗ್ಯ ಸೇವೆಗಳ ಪ್ರಾಮುಖ್ಯತೆಯನ್ನು ಮನಗಂಡು, ಜನಸಾಮಾನ್ಯರಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವುದು ಈ ಶಿಬಿರಗಳ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಜಗದ್ಗುರು ಶ್ರೀ ಮಡಿವಾಳ ಮಾಚಿದೇವ ಸ್ವಾಮೀಜಿ, ಕಾಂಗ್ರೆಸ್ ಮುಖಂಡರು ಕುಸುಮಾ ಹನುಮಂತರಾಯಪ್ಪ, ಲಗ್ಗೆರೆ ನಾರಾಯಣಸ್ವಾಮಿ, ಮಂಜುಳಾ ನಾರಾಯಣಸ್ವಾಮಿ, ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ, ಆಶಾ ಸುರೇಶ್, ರೂಪಾ ಲಿಂಗೇಶ್, ಮಂಜುಳಾ ಮಂಜುನಾಥ್ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande