ಹಿಂದಿ ಕೈಬಿಡುವ ಹಠಾತ್ ನಿರ್ಧಾರ ಆಘಾತಕಾರಿ: ವಿಜಯೇಂದ್ರ
ಬೆಂಗಳೂರು, 29 ಮಾರ್ಚ್ (ಹಿ.ಸ.): ಆ್ಯಂಕರ್:ರಾಜ್ಯದಲ್ಲಿ ಏಕಾಏಕಿ ಹಿಂದಿ ಭಾಷೆಯನ್ನು ಕೈಬಿಡುವ ನಿಲುವು ತೆಗೆದುಕೊಂಡಿರುವುದು ಆಘಾತಕಾರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ ಅವರು, ಎಸ್ಎಸ್ಎಲ್ ಸಿ ಪರೀಕ್
Byv


ಬೆಂಗಳೂರು, 29 ಮಾರ್ಚ್ (ಹಿ.ಸ.):

ಆ್ಯಂಕರ್:ರಾಜ್ಯದಲ್ಲಿ ಏಕಾಏಕಿ ಹಿಂದಿ ಭಾಷೆಯನ್ನು ಕೈಬಿಡುವ ನಿಲುವು ತೆಗೆದುಕೊಂಡಿರುವುದು ಆಘಾತಕಾರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ ಅವರು, ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯುತ್ತಿರುವ ಸಮಯದಲ್ಲೇ ಸರ್ಕಾರ ಹಠಾತ್ ನಿರ್ಧಾರ ಕೈಗೊಂಡಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ. ಶಿಕ್ಷಣದಂತಹ ಸೂಕ್ಷ್ಮ ವಿಷಯಗಳಲ್ಲಿ ತುರ್ತು ನಿರ್ಧಾರಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಅನುಸರಿಸಲಾಗುತ್ತಿರುವ ತ್ರಿಭಾಷಾ ಸೂತ್ರವು ಕನ್ನಡವನ್ನು ಅಸ್ಮಿತೆಯಾಗಿ, ಇಂಗ್ಲಿಷ್‌ನ್ನು ಸಂವಹನ ಭಾಷೆಯಾಗಿ ಹಾಗೂ ಹಿಂದಿಯನ್ನು ರಾಷ್ಟ್ರೀಯ ದೃಷ್ಟಿಕೋನದಿಂದ ಪರಿಗಣಿಸುತ್ತಿದೆ ಎಂದು ವಿಜಯೇಂದ್ರ ವಿವರಿಸಿದರು. ಈ ಹಿನ್ನೆಲೆ, ಹಿಂದಿ ಭಾಷೆಯನ್ನು ಕೈಬಿಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಭಾಷಾ ತಜ್ಞರು, ಶಿಕ್ಷಣ ತಜ್ಞರು, ವಿವಿಧ ಭಾಷೆಗಳ ಸಾಹಿತಿಗಳು ಹಾಗೂ ಸಾರ್ವಜನಿಕರೊಂದಿಗೆ ವ್ಯಾಪಕ ಚರ್ಚೆ ನಡೆಸುವುದು ಅಗತ್ಯವಾಗಿದೆ ಎಂದು ಅವರು ಆಗ್ರಹಿಸಿದರು.

ಶಿಕ್ಷಣ ಮತ್ತು ಭಾಷಾ ನೀತಿ ವಿಷಯಗಳಲ್ಲಿ ಸಮಗ್ರ ಸಮಾಲೋಚನೆ ಇಲ್ಲದೆ ತೆಗೆದುಕೊಳ್ಳುವ ನಿರ್ಧಾರಗಳು ಅನಾಹುತಗಳಿಗೆ ಕಾರಣವಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande