
ದಾವಣಗೆರೆ, 29 ಮಾರ್ಚ್ (ಹಿ.ಸ.):
ಆ್ಯಂಕರ್:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರು ಮತ್ತು ಪ್ರಮುಖರ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷವು ಬೂತ್ ಮಟ್ಟದಲ್ಲಿಯೇ ಸಂಘಟಿತವಾಗಿ ಸಜ್ಜಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬ ಕಾರ್ಯಕರ್ತರೂ ಮತದಾರರನ್ನು ನೇರವಾಗಿ ಸಂಪರ್ಕಿಸಿ ಪಕ್ಷದ ಸಾಧನೆಗಳು ಹಾಗೂ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಸೂಚಿಸಿದರು.
ಉಪಚುನಾವಣೆ ಹಿನ್ನೆಲೆ ಸಂಘಟಿತ ಕಾರ್ಯಪದ್ಧತಿಯ ಅಗತ್ಯವನ್ನು ಒತ್ತಿಹೇಳಿದ ವಿಜಯೇಂದ್ರ, ಕಾರ್ಯಕರ್ತರ ಸಮರ್ಪಣೆ ಮತ್ತು ಶ್ರಮದಿಂದಲೇ ಪಕ್ಷದ ಗೆಲುವು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ವಿಭಾಗ ಪ್ರಭಾರಿಗಳಾದ ಟಿ.ಡಿ. ಮೇಘರಾಜ್, ಜಿಲ್ಲಾಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa