ರಾಜ್ಯದಲ್ಲಿ ಬಿಸಿಲು ಮುಂದುವರಿಕೆ, ಕೆಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ
ಬೆಂಗಳೂರು, 29 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತೀ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯದಾದ್ಯಂತ ಒಣ ಹವಾಮಾನ ಹಾಗೂ ತೀವ್ರ ಬಿಸಿಲು ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಬಹುದು. ವಿಶ
ರಾಜ್ಯದಲ್ಲಿ ಬಿಸಿಲು ಮುಂದುವರಿಕೆ, ಕೆಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ


ಬೆಂಗಳೂರು, 29 ಮಾರ್ಚ್ (ಹಿ.ಸ.):

ಆ್ಯಂಕರ್:

ಭಾರತೀ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯದಾದ್ಯಂತ ಒಣ ಹವಾಮಾನ ಹಾಗೂ ತೀವ್ರ ಬಿಸಿಲು ಮುಂದುವರಿಯುವ ಸಾಧ್ಯತೆಯಿದೆ.

ಮಧ್ಯಾಹ್ನ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಬಹುದು. ವಿಶೇಷವಾಗಿ ಒಳನಾಡು ಪ್ರದೇಶಗಳಲ್ಲಿ ವಾತಾವರಣದಲ್ಲಿ ತಾತ್ಕಾಲಿಕ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ.

ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande