ಶೇ.5 ರಿಯಾಯಿತಿ ಸೌಲಭ್ಯ: ಆಸ್ತಿ ತೆರಿಗೆ ಪಾವತಿ ಅವಧಿ ವಿಸ್ತರಣೆ
ಶಿವಮೊಗ್ಗ, 30 ಮಾರ್ಚ್ (ಹಿ.ಸ.): ಆ್ಯಂಕರ್: ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿ ಆವರಣದಲ್ಲಿ ವಿಶೇಷ ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರು ನೇರವಾಗಿ ಕಚೇರಿಗೆ ಭೇಟಿ ನೀಡಿ ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿ
ಶೇ.5 ರಿಯಾಯಿತಿ ಸೌಲಭ್ಯ: ಆಸ್ತಿ ತೆರಿಗೆ ಪಾವತಿ ಅವಧಿ ವಿಸ್ತರಣೆ


ಶಿವಮೊಗ್ಗ, 30 ಮಾರ್ಚ್ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿ ಆವರಣದಲ್ಲಿ ವಿಶೇಷ ಕೌಂಟರ್‌ಗಳನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರು ನೇರವಾಗಿ ಕಚೇರಿಗೆ ಭೇಟಿ ನೀಡಿ ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಇದರ ಜೊತೆಗೆ, ಮಹಾನಗರಪಾಲಿಕೆಯ ಅಧಿಕೃತ ವೆಬ್‌ಸೈಟ್ ಮುಖಾಂತರ ಆನ್‌ಲೈನ್ ಪಾವತಿ ವ್ಯವಸ್ಥೆಯೂ ಲಭ್ಯವಿದ್ದು, ಪೇಟಿಎಂ, ನೆಟ್‌ಬ್ಯಾಂಕಿಂಗ್, ಡೆಬಿಟ್/ಕ್ರೆಡಿಟ್ ಕಾರ್ಡ್ ಹಾಗೂ ಶಿವಮೊಗ್ಗ ಒನ್ ವ್ಯವಸ್ಥೆಯ ಮೂಲಕವೂ ತೆರಿಗೆ ಪಾವತಿಸಬಹುದಾಗಿದೆ.

2026-27ನೇ ಸಾಲಿನ ಖಾತೆದಾರರಿಗೆ ಇಡಿಸಿ (ಪಿಒಎಸ್) ಯಂತ್ರಗಳ ಮೂಲಕ ತಕ್ಷಣ ರಸೀದಿ ನೀಡುವ ವ್ಯವಸ್ಥೆ ಮಾಡಲಾಗಿದೆ.

2026-27ನೇ ಆರ್ಥಿಕ ವರ್ಷದ ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ಏಪ್ರಿಲ್ 30ರವರೆಗೆ ಶೇ.5 ರಿಯಾಯಿತಿ ಸೌಲಭ್ಯ ಲಭ್ಯವಿರುತ್ತದೆ. ಜೂನ್ 30ರವರೆಗೆ ದಂಡವಿಲ್ಲದೆ ತೆರಿಗೆ ಪಾವತಿಸಲು ಅವಕಾಶವಿದ್ದು, ಜುಲೈ 1ರಿಂದ ಪಾವತಿಸಿದಲ್ಲಿ ಮಾಸಿಕ ಶೇ.2 ರಷ್ಟು ದಂಡ ವಿಧಿಸಲಾಗುತ್ತದೆ.

ಆದ್ದರಿಂದ ಸಾರ್ವಜನಿಕರು ಏಪ್ರಿಲ್ ಅವಧಿಯೊಳಗೆ ತೆರಿಗೆ ಪಾವತಿಸಿ ಶೇ.5 ರಿಯಾಯಿತಿ ಪಡೆಯುವಂತೆ ಹಾಗೂ ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಶಿವಮೊಗ್ಗ ಮಹಾನಗರಪಾಲಿಕೆ ಉಪ ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande