
ಸೇಡಂ, 30 ಮಾರ್ಚ್ (ಹಿ.ಸ.):
ಆ್ಯಂಕರ್:ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹೊಸಳ್ಳಿ ಗ್ರಾಮದಿಂದ ಸೇಡಂ–ಕಲಬುರಗಿ ಮುಖ್ಯರಸ್ತೆ ಎಸ್.ಎಚ್.10ರವರೆಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಗೆ 2024-25ನೇ ಸಾಲಿನ ಡಿ.ಎಂ.ಎಫ್ ಯೋಜನೆಯಡಿ ಅಂದಾಜು 80 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಸಚಿವ ಶರಣಪ್ರಕಾಶ ಪಾಟೀಲ ಅಡಿಗಲ್ಲು ಹಾಗೂ ಭೂಮಿ ಪೂಜೆ ನೆರವೇರಿಸಿದರು.
ಹೊಸಳ್ಳಿ ಗ್ರಾಮದ ಈ ಕೂಡು ರಸ್ತೆ ಗ್ರಾಮ ಹಾಗೂ ಸರಕಾರಿ ಶಾಲೆಗೆ ಪ್ರಮುಖ ಸಂಪರ್ಕವಾಗಿದ್ದು, ಮಳೆಯ ಸಂದರ್ಭದಲ್ಲಿ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿತ್ತು. ಈ ಸಮಸ್ಯೆಯನ್ನು ಮನಗಂಡು ತ್ವರಿತವಾಗಿ ಕಾರ್ಯಯೋಜನೆ ಸಿದ್ಧಪಡಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಗ್ರಾಮೀಣ ಭಾಗಗಳಲ್ಲಿ ರಸ್ತೆ ಹಾಗೂ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಲು ವಿಶೇಷ ಅನುದಾನದಡಿ ಇಂತಹ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಹೊಸಳ್ಳಿ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa