ಪ್ರತಿ ತಿಂಗಳ ಮೊದಲನೇ ಬುಧವಾರ ಮಕ್ಕಳಿಗೆ ಉಚಿತ ಹೃದಯ ತಪಾಸಣೆ
ಚಿತ್ರದುರ್ಗ, 30 ಮಾರ್ಚ್ (ಹಿ.ಸ.): ಆ್ಯಂಕರ್:ಚಿತ್ರದುರ್ಗ ಜಿಲ್ಲಾಸ್ಪತ್ರೆ ಹಾಗೂ ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ, ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳ ಮೊದಲನೇ ಬುಧವಾರ ಮಕ್ಕಳಿಗೆ ಉಚಿತ ಹೃದಯ ತಪಾಸಣೆ ಶಿಬಿರವ
ಪ್ರತಿ ತಿಂಗಳ ಮೊದಲನೇ ಬುಧವಾರ ಮಕ್ಕಳಿಗೆ ಉಚಿತ ಹೃದಯ ತಪಾಸಣೆ


ಚಿತ್ರದುರ್ಗ, 30 ಮಾರ್ಚ್ (ಹಿ.ಸ.):

ಆ್ಯಂಕರ್:ಚಿತ್ರದುರ್ಗ ಜಿಲ್ಲಾಸ್ಪತ್ರೆ ಹಾಗೂ ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ, ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳ ಮೊದಲನೇ ಬುಧವಾರ ಮಕ್ಕಳಿಗೆ ಉಚಿತ ಹೃದಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗುತ್ತಿದೆ.

ಪ್ರತಿ ತಿಂಗಳ ಮೊದಲನೇ ಬುಧವಾರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೃದಯ ತಜ್ಞ ಡಾ. ಜಿ.ಎಸ್. ಅನಿಲ್ ಕುಮಾರ್ ಅವರು ಮಕ್ಕಳಿಗೆ ತಪಾಸಣೆ ನಡೆಸಲಿದ್ದಾರೆ.

ಮಕ್ಕಳಲ್ಲಿ ಪದೇ ಪದೇ ಸೋಂಕು ಕಾಣಿಸಿಕೊಳ್ಳುವುದು, ಚರ್ಮ ಮತ್ತು ತುಟಿಗಳು ನೀಲಿ ಬಣ್ಣಕ್ಕೆ ತಿರುಗುವುದು, ಉಸಿರಾಟದಲ್ಲಿ ತೊಂದರೆ ಅಥವಾ ಏದುಸಿರು, ಅನಿಯಮಿತ ಹೃದಯ ಬಡಿತ, ಮರುಕಳಿಸುವ ಕೆಮ್ಮು ಇತ್ಯಾದಿ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಈ ಉಚಿತ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9535025743 ಅಥವಾ 7259759982 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande