
ಶಿವಮೊಗ್ಗ, 30 ಮಾರ್ಚ್ (ಹಿ.ಸ.):
ಆ್ಯಂಕರ್:
2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಹ ಸಾಮಾನ್ಯ, ಪರಿಶಿಷ್ಠ ಜಾತಿ (ಪ.ಜಾ.) ಹಾಗೂ ಪರಿಶಿಷ್ಠ ಪಂಗಡ (ಪ.ಪಂ.) ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
“ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ/ಕೀಟ ನಿಯಂತ್ರಣ” ಕಾರ್ಯಕ್ರಮದಡಿ ಜೈವಿಕ ಗೊಬ್ಬರವಾದ ಅರ್ಕ ಮೈಕ್ರೋಬಿಯಲ್ ಕನ್ಸಾರ್ಷಿಯಮ್ ಪರಿಕರ ವಿತರಿಸಲಾಗುತ್ತಿದೆ. ಇದೇ ವೇಳೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಲಘು ಪೋಷಕಾಂಶಗಳ ಮಿಶ್ರಣ ಅಥವಾ ಬೆಳೆ ಸ್ಪೇಷಲ್ ಪರಿಕರವನ್ನು ರೈತರಿಗೆ ನೀಡಲಾಗುತ್ತಿದೆ.
ಆಸಕ್ತ ರೈತರು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಆರ್‌ಡಿ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣ ಪತ್ರದ ನಕಲುಗಳೊಂದಿಗೆ ಶಿಕಾರಿಪುರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa