ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆಗೆ ಅವಕಾಶ
ಗದಗ, 30 ಮಾರ್ಚ್ (ಹಿ.ಸ.) ಆ್ಯಂಕರ್:- ರೇಷನ್ ಕಾರ್ಡ್ ತಿದ್ದುಪಡಿ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಗಳನ್ನು ಪ್ರತಿದಿನ ಬೆಳಿಗ್ಗೆ 10.00ರಿಂದ ಸಂಜೆ 5.00ರವರೆಗೆ ಸ್ವೀಕರಿಸಲಾಗುತ್ತಿದ್ದು, ಮಾರ್ಚ್ 31, 2026 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರಕಟಣ
ಫೋಟೋ


ಗದಗ, 30 ಮಾರ್ಚ್ (ಹಿ.ಸ.)

ಆ್ಯಂಕರ್:- ರೇಷನ್ ಕಾರ್ಡ್ ತಿದ್ದುಪಡಿ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಗಳನ್ನು ಪ್ರತಿದಿನ ಬೆಳಿಗ್ಗೆ 10.00ರಿಂದ ಸಂಜೆ 5.00ರವರೆಗೆ ಸ್ವೀಕರಿಸಲಾಗುತ್ತಿದ್ದು, ಮಾರ್ಚ್ 31, 2026 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇಚ್ಛಿಸುವವರು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗಿದೆ. ತಿದ್ದುಪಡಿ ಪ್ರಕ್ರಿಯೆಯಲ್ಲಿ ಸದಸ್ಯರ ಹೆಸರು ಸೇರಿಸುವುದು ಅಥವಾ ತೆಗೆಯುವುದು, ಕುಟುಂಬ ಮುಖ್ಯಸ್ಥರ ಬದಲಾವಣೆ, ಸದಸ್ಯರ ಫೋಟೋ ಅಪ್ಡೇಟ್, ವಿಳಾಸ ಬದಲಾವಣೆ, ರೇಷನ್ ಅಂಗಡಿ ಬದಲಾವಣೆ ಸೇರಿದಂತೆ ಹಲವು ಸೇವೆಗಳು ಲಭ್ಯವಿವೆ.

ಅರ್ಜಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಸರಿಯಾಗಿ ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಾಲ್ಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಕೆ. ಮಂದಾಲಿ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande