
ತುಮಕೂರು, 30 ಮಾರ್ಚ್ (ಹಿ.ಸ.):
ಆ್ಯಂಕರ್:ಏಪ್ರಿಲ್ 01 ರಂದು ತುಮಕೂರು ಸಿದ್ದಗಂಗಾ ಮಠದಲ್ಲಿ ಪರಮಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಆಚರಣೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ಸಿದ್ಧತೆಗಳನ್ನು ಕಟ್ಟು ನಿಟ್ಟಾಗಿ ಕೈಗೊಳ್ಳಲಾಗಿದೆ.
ಈ ಸಂಬಂಧ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಜೊತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಡೆಸಿ, ಭದ್ರತೆಗೆ ಸಂಬಂಧಿಸಿದಂತೆ ಅಗತ್ಯ ಸೂಕ್ತ ನಿರ್ದೇಶನಗಳನ್ನು ನೀಡಿದರು. ಕಾರ್ಯಕ್ರಮದ ವೇಳೆ ಜನಸಂದಣಿ ನಿಯಂತ್ರಣ, ವಾಹನ ಸಂಚಾರ ವ್ಯವಸ್ಥೆ ಹಾಗೂ ಪ್ರಮುಖ ಸ್ಥಳಗಳ ಭದ್ರತೆ ಕುರಿತು ವಿಶೇಷ ಗಮನ ಹರಿಸಲು ಸೂಚಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa