10ನೇ ತರಗತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ: ಜಿಲ್ಲಾ ಕೇಂದ್ರ ಪರಿಶೀಲಿಸಿದ ಜಿ.ಪಂ. ಸಿಇಒ ರಿಷಿ ಆನಂದ
ವಿಜಯಪುರ, 31 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ೧೦ನೇ ತರಗತಿ ಪರೀಕ್ಷೆ–1 ಅನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರವನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮ
ಪರೀಕ್ಷೆ


ವಿಜಯಪುರ, 31 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ

ಜಿಲ್ಲೆಯಲ್ಲಿ ನಡೆಯುತ್ತಿರುವ ೧೦ನೇ ತರಗತಿ ಪರೀಕ್ಷೆ–1 ಅನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರವನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮಂಗಳವಾರ ಪರಿಶೀಲಿಸಿದರು.

ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾದ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಚಟುವಟಿಕೆಗಳನ್ನು ನೇರ ಪ್ರಸಾರದ ಮೂಲಕ ವೀಕ್ಷಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಇಂಟರ್ನೆಟ್ ಸಂಪರ್ಕದ ಸ್ಥಿರತೆ, ದೃಶ್ಯಗಳ ಸ್ಪಷ್ಟತೆ ಹಾಗೂ ನಿಯಂತ್ರಣ ಕೊಠಡಿಯ ಕಾರ್ಯವಿಧಾನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು.

ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ನಿಗಾವಹಣೆ ಅತ್ಯಗತ್ಯ ಎಂದು ತಿಳಿಸಿದ ಸಿಇಒ ರಿಷಿ ಆನಂದ, ವೆಬ್ ಕಾಸ್ಟಿಂಗ್ ವ್ಯವಸ್ಥೆ ವಿದ್ಯಾರ್ಥಿಗಳಿಗೆ ನ್ಯಾಯಯುತ ಹಾಗೂ ಪಾರದರ್ಶಕ ವಾತಾವರಣ ಕಲ್ಪಿಸಲು ಪ್ರಮುಖ ಪಾತ್ರವಹಿಸುತ್ತಿದೆ ಎಂದು ಹೇಳಿದರು.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ದೋಷಗಳು ಎದುರಾಗದಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಟ್ಟದ ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯಿಂದ ವ್ಯವಸ್ಥೆಯ ಕಾರ್ಯವಿಧಾನದ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದ ಕೂಡಲೇ ತಕ್ಷಣ ಸರಿಪಡಿಸುವಂತೆ ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಸ್ಪಂದಿಸುವ ವ್ಯವಸ್ಥೆ ಸದಾ ಸಿದ್ಧವಾಗಿರಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಜಾಗರೂಕತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಎಸ್ಎಸ್ಎಲ್ಸಿ ಜಿಲ್ಲಾ ನೋಡೆಲ್ ಅಧಿಕಾರಿ ಟಿ.ಎಸ್. ಕೊಲ್ಹಾರ, ಜಿಲ್ಲೆಯ ವಿವಿಧ ವಲಯಗಳ ಮುಖ್ಯಸ್ಥರು, ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೊಲೀಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande