
ಬಾಗಲಕೋಟೆ, 31 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಂಗವಾಗಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಅಬ್ಬರದ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಸಿದರು.
ಗ್ರಾಮದ ವಿವಿಧ ಬೀದಿಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದ ಬಿಜೆಪಿ ನಾಯಕರು, ಪಕ್ಷದ ಸಾಧನೆಗಳು ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಕೈಗೊಳ್ಳಲಾಗುವ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿದರು. ಈ ವೇಳೆ ಗ್ರಾಮಸ್ಥರು ಉತ್ತಮ ಪ್ರತಿಕ್ರಿಯೆ ನೀಡಿದ್ದು, ಅಭ್ಯರ್ಥಿಗೆ ಬೆಂಬಲ ಸೂಚಿಸಿದರು.
ಪ್ರಚಾರದಲ್ಲಿ ಬೆಳಗಾವಿ ಬಿಜೆಪಿ ಪ್ರಭಾರಿಗಳಾದ ಬಸವರಾಜ್ ಯಂಕಚಿ ಭಾಗವಹಿಸಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ದುಂಡಪ್ಪ, ಪರಶುರಾಮ್ ಸೇರಿದಂತೆ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande