ಮತದಾರರ ಪರಿಷ್ಕರಣೆಯಲ್ಲಿ ಭಾಗಿಯಾಗಲು ಜೆಡಿಎಸ್ ಕಾರ್ಯಕರ್ತರಿಗೆ ಕರೆ
ಮತದಾರರ ಪರಿಷ್ಕರಣೆಯಲ್ಲಿ ಭಾಗಿಯಾಗಲು ಜೆಡಿಎಸ್ ಕಾರ್ಯಕರ್ತರಿಗೆ ಕರೆ
ಜೆಡಿಎಸ್ ಮುಖಂಡ ನಟರಾಜ್.


ಕೋಲಾರ, ೩೧ ಮಾರ್ಚ್ (ಹಿ.ಸ):

ಆ್ಯಂಕರ್ : ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಘಟಕದ ಆದೇಶದ ಮೇರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಜಾಗರೂಕತೆಯಿಂದ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಬೂತ್ ಮಟ್ಟದಲ್ಲಿ ನೋಂದಣಿ ಮಾಡಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಪಕ್ಷದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮನವಿ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು ಮತದಾರರ ಪಟ್ಟಿಯಲ್ಲಿ ಹೊಸ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮೃತಪಟ್ಟ ಅಥವಾ ಸ್ಥಳಾಂತರಗೊAಡ ಮತದಾರರ ಹೆಸರನ್ನು ತೆಗೆದುಹಾಕುವ ತಾಂತ್ರಿಕ ಪ್ರಕ್ರಿಯೆಗಳ ಬಗ್ಗೆ ಜೆಡಿಎಸ್ ಪಕ್ಷದ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಸವಿಸ್ತಾರವಾಗಿ ಮಾಹಿತಿ ನೀಡಬೇಕು ಪ್ರತಿಯೊಂದು ಮತಗಟ್ಟೆಯ ವ್ಯಾಪ್ತಿಯಲ್ಲಿ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಮತ್ತು ಪಾರದರ್ಶಕ ಮತದಾನಕ್ಕೆ ಪೂರಕವಾದ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಬೂತ್ ಮಟ್ಟದಲ್ಲಿನ ಪ್ರಮುಖರು ಮುಖ್ಯವಾದ ಪಾತ್ರವನ್ನು ವಹಿಸುವಂತೆ ಮನವಿ ಮಾಡಿದರು.

ಮುಂಬರುವ ಜಿಪಂ, ತಾಪಂ, ಗ್ರಾಮ ಪಂಚಾಯತಿ ಸ್ಥಳೀಯ ಸಂಸ್ಥೆಗಳ ಸೇರಿದಂತೆ ೨೦೨೮ರ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಂತೆ ಪಕ್ಷವನ್ನು ಈಗಿನಿಂದಲೇ ಸಂಘಟನೆ ಮಾಡಬೇಕು ಪಕ್ಷದ ರಾಜ್ಯ ಘಟಕದ ಆದೇಶವನ್ನು ಪ್ರತಿಯೊಬ್ಬರೂ ಜಾರಿ ಮಾಡುವಂತೆ ಬಣಕನಹಳ್ಳಿ ನಟರಾಜ್ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande