ಗ್ಯಾರಂಟಿ ಯೋಜನೆಗಳ ಬಗ್ಗೆ ಹೋಬಳಿ ಮಟ್ಟದಲ್ಲಿ ಪ್ರಚಾರ ಮಾಡಲು ಕರೆ
ಗ್ಯಾರಂಟಿ ಯೋಜನೆಗಳ ಬಗ್ಗೆ ಹೋಬಳಿ ಮಟ್ಟದಲ್ಲಿ ಪ್ರಚಾರ ಮಾಡಲು ಕರೆ
ಕೋಲಾರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.


ಕೋಲಾರ, ೩೧ ಮಾರ್ಚ್ (ಹಿ.ಸ)

ಆಂಕರ್ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಐದು ಇಲಾಖೆಗಳು ಒಳಗೊಂಡಂತೆ ಪ್ರತಿಯೊಂದು ಹೋಬಳಿ ಕೇಂದ್ರದಲ್ಲಿ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳ ಸಮಾವೇಶವನ್ನು ನಡೆಸಿ ಅಲ್ಲಿಯೇ ಸೌಲಭ್ಯಗಳನ್ನು ಕೊಡಿಸುವ ಕೆಲಸವನ್ನು ಮಾಡಲಾಗುತ್ತದೆ ಇದಕ್ಕೆ ವ್ಯಾಪಕ ಪ್ರಚಾರ ಮಾಡುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವೇಮಗಲ್ ವಿ.ಎಂ ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು. ಗ್ರಾಮ ಪಂಚಾಯತಿ ಪಿಡಿಒಗಳ ನೇತೃತ್ವದಲ್ಲಿ ಅ ಭಾಗದ ಆಶಾ ಕಾರ್ಯಕರ್ತರು, ಜಲಗಾರರು, ಅಧಿಕಾರಿಗಳು ಒಳಗೊಂಡಂತೆ ಹೋಬಳಿಯ ಸಮಾವೇಶಕ್ಕೆ ಸಂಬ0ಧಿಸಿದ0ತೆ ಪ್ರತಿಯೊಂದು ಗ್ರಾಮದಲ್ಲಿ ಕರಪತ್ರಗಳನ್ನು ಹಂಚಿ ವ್ಯಾಪಕ ಪ್ರಚಾರ ಮಾಡಿ ಯೋಜನೆಯ ಫಲಾನುಭವಿಯಾಗಿ ಮಾಡಬೇಕು ಎಂದರು.

ಬಡಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಎಲ್ಲರ ಮನೆಗೆ ತಲುಪುವಂತೆ ಮಾಡಿದ್ದು, ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ತಲುಪುವಂತೆ ಮಾಡಬೇಕು ಗ್ರಾಪಂ ಪಿಡಿಒಗಳು ಗ್ಯಾರಂಟಿ ಯೋಜನೆಗಳ ಫಲ ಪಡೆಯಲು ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರುಸುತ್ತಿರುವ ಫಲಾನುಭವಿಗಳನ್ನು ಪತ್ತೆಹಚ್ಚಿ, ಅವರಿಗೆ ಯೋಜನೆ ಸೌಲಭ್ಯ ದೊರೆಯುವಂತೆ ಪ್ರಯತ್ನಿಸಬೇಕು ಎಂದು ತಾಪಂ ಇಒಗೆ ಸೂಚನೆ ನೀಡಿದರು,

ಕೆಲವು ಭಾಗದಲ್ಲಿ ರೇಷನ್ ಕಾರ್ಡ್ಗಳು ರದ್ದಾಗುತ್ತಿದ್ದು ಇದರಿಂದ ಬಡವರಿಗೆ ಅನ್ಯಾಯ ಆಗಬಾರದು. ಅರ್ಹ ಫಲಾನುಭವಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಶ್ರೀಮಂತರಲ್ಲಿ ಇಂತಹ ಕಾರ್ಡ್ಗಳಿದ್ದರೆ ರದ್ದು ಮಾಡಿ. ಆದರೆ ನಿಜವಾಗಿಯೂ ಅರ್ಹತೆ ಇದ್ದರೆ ಪರಿಶೀಲಿಸಿ ಕಾರ್ಡ್ ಉಳಿಸಿಕೊಳ್ಳುವ ಕೆಲಸವಾಗಬೇಕು ಎಂದು ಗ್ಯಾರಂಟಿ ಸಮಿತಿ ಒತ್ತಾಯಿಸಿದರು. ಅವಶ್ಯವಿರುವ ದಾಖಲಾತಿಗಳನ್ನು ಸಲ್ಲಿಸಿದಲ್ಲಿ ಅವುಗಳನ್ನು ಪರಿಶೀಲಿಸಿ ಕ್ರಮವಹಿಸಲಾಗುವದು ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು

ಮುಂದಿನ ವಾರದೊಳಗೆ ಆಹಾರ ಇಲಾಖೆಯಿಂದ ತಾಲೂಕಿನ ಪಡಿತರ ವಿತರಣೆಯ ಸೊಸೈಟಿಗಳ ಸಭೆ ಕರೆಯಬೇಕು ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೂ ತಕ್ಷಣವೇ ಸ್ಪಂದಿಸಬೇಕು ಎಂದು ತಿಳಿಸಿದರು ಸಭೆಯಲ್ಲಿ ತಾಪಂ ಇಒ ಮಂಜುನಾಥ್ ಸೇರಿದಂತೆ ತಾಲೂಕು ಸಮಿತಿ ಸದಸ್ಯರು ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande