
ದಾವಣಗೆರೆ, 31 ಮಾರ್ಚ್ (ಹಿ.ಸ.):
ಆ್ಯಂಕರ್:ದಾವಣಗೆರೆ ಜಿಲ್ಲೆಯಲ್ಲಿ ಇಂದು ನಡೆದ ಎಸ್.ಎಸ್.ಎಲ್.ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಶೇ. 98.80 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ,
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲಾದ್ಯಂತ ಒಟ್ಟು 20927 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 20675 (ಶೇ. 98.80) ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆಗೆ ಹಾಜರಾಗಿದ್ದು, ಉಳಿದ 252 (ಶೇ. 1.20) ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa