ದಾವಣಗೆರೆ ದಕ್ಷಿಣ ಉಪಚುನಾವಣೆ: ಪೂರ್ವಸಿದ್ಧತೆ ಕುರಿತು ಕಾಂಗ್ರೆಸ್ ಮಹತ್ವದ ಸಭೆ
ದಾವಣಗೆರೆ, 31 ಮಾರ್ಚ್ (ಹಿ.ಸ.): ಆ್ಯಂಕರ್: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಡಿಸಿಸಿ ಮುಖಂಡರ
Cong meeting


ದಾವಣಗೆರೆ, 31 ಮಾರ್ಚ್ (ಹಿ.ಸ.):

ಆ್ಯಂಕರ್:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಡಿಸಿಸಿ ಮುಖಂಡರು ಹಾಗೂ ಕ್ಷೇತ್ರದ ಪ್ರಮುಖ ನಾಯಕರು ಭಾಗವಹಿಸಿ, ಉಪಚುನಾವಣೆಯ ಪೂರ್ವಸಿದ್ಧತೆ, ಪ್ರಚಾರ ತಂತ್ರಗಳು ಹಾಗೂ ಸಂಘಟನೆ ಬಲವರ್ಧನೆ ಕುರಿತು ಸವಿಸ್ತಾರವಾಗಿ ಚರ್ಚಿಸಿದರು.

ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಚಟುವಟಿಕೆಗಳನ್ನು ಇನ್ನಷ್ಟು ಚುರುಕುಗೊಳಿಸುವುದು, ಮತದಾರರ ಸಂಪರ್ಕ ಹೆಚ್ಚಿಸುವುದು ಮತ್ತು ಪಕ್ಷದ ಬಲವನ್ನು ಏಕೀಕರಿಸುವ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಯಿತು.

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕರು ಸಮನ್ವಯದಿಂದ ಕಾರ್ಯನಿರ್ವಹಿಸಿ ವಿಜಯ ಸಾಧಿಸುವತ್ತ ದಿಟ್ಟ ಹೆಜ್ಜೆ ಇಡುವಂತೆ ಸೂಚನೆ ನೀಡಿದರು

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande