ದಾವಣಗೆರೆ ಉಪಚುನಾವಣೆ: ಬಿಜೆಪಿ ಘೋಷಣಾಪತ್ರ ಬಿಡುಗಡೆ
ದಾವಣಗೆರೆ, 31 ಮಾರ್ಚ್ (ಹಿ.ಸ.): ಆ್ಯಂಕರ್: ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಂಗಳವಾರ ದಾವಣಗೆರೆಯಲ್ಲಿ ಬಿಜೆಪಿ ಚುನಾವಣಾ ಘೋಷಣಾಪತ್ರವನ್ನು ಬಿಡುಗಡೆ ಮಾಡಿದರು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸಕರಿಯಪ್ಪ ಅವರೊಂದಿಗೆ ಘೋಷಣಾಪತ್ರ
Bjp


ದಾವಣಗೆರೆ, 31 ಮಾರ್ಚ್ (ಹಿ.ಸ.):

ಆ್ಯಂಕರ್:

ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಂಗಳವಾರ ದಾವಣಗೆರೆಯಲ್ಲಿ ಬಿಜೆಪಿ ಚುನಾವಣಾ ಘೋಷಣಾಪತ್ರವನ್ನು ಬಿಡುಗಡೆ ಮಾಡಿದರು.

ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸಕರಿಯಪ್ಪ ಅವರೊಂದಿಗೆ ಘೋಷಣಾಪತ್ರ ಬಿಡುಗಡೆ ಮಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿ, ಜನಕಲ್ಯಾಣ, ರೈತರ ಮತ್ತು ಯುವಕರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಲವು ಮಹತ್ವದ ಸಂಕಲ್ಪಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು. “ದಾವಣಗೆರೆ ಜನತೆಯ ಆಶೀರ್ವಾದದೊಂದಿಗೆ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗಲಿದೆ” ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ವಿಧಾನಪರಿಷತ್ ಮಾಜಿ ಸದಸ್ಯರಾದ ಶಿವಯೋಗಿಸ್ವಾಮಿ, ವೈ.ಎ. ನಾರಾಯಣಸ್ವಾಮಿ, ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande