
ದಾವಣಗೆರೆ, 31 ಮಾರ್ಚ್ (ಹಿ.ಸ.):
ಆ್ಯಂಕರ್:
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಉಪ ಮುಖ್ಯಮಂತ್ರಿ Dಡಿ.ಕೆ. ಶಿವಕುಮಾರ್ ಅವರು ಮಂಗಳವಾರ ದಾವಣಗೆರೆಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ವೇಗ ನೀಡಿದ್ದಾರೆ.
ಈ ವೇಳೆ ಬಂಡಾಯದ ಬಾವುಟ ಹಾರಿಸಿದ್ದ ಕಾಂಗ್ರೆಸ್ ಮುಖಂಡರಾದ ಸಾದಿಕ್ ಪೈಲ್ವಾನ್ ಹಾಗೂ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ,ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ ಅವರ ನಿವಾಸಗಳಿಗೆ ಭೇಟಿ ನೀಡಿ ಆತಿಥ್ಯ ಸ್ವೀಕರಿಸಿದರು. ಸ್ಥಳೀಯ ನಾಯಕರೊಂದಿಗೆ ಸಭೆ ನಡೆಸಿ ಚುನಾವಣಾ ತಂತ್ರಗಳ ಕುರಿತು ಚರ್ಚಿಸಿದರು.
ಈ ಸಂದರ್ಭ ಮಾತನಾಡಿದ ಡಿ.ಕೆ. ಶಿವಕುಮಾರ್, “ನಮ್ಮ ಪಕ್ಷದ ಸಂಘಟಿತ ಶಕ್ತಿ ಮತ್ತು ನಾಯಕರು-ಕಾರ್ಯಕರ್ತರ ಒಗ್ಗಟ್ಟಿನಿಂದ ದಾವಣಗೆರೆಯಲ್ಲಿ ಕಾಂಗ್ರೆಸ್ ‘ಕೈ’ ಬಲವಾಗಿದೆ. ಇದೇ ಒಗ್ಗಟ್ಟಿನ ಬಲದಿಂದ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸುವುದು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa