ಅಕಾಲಿಕ ಮಳೆ ಹಾನಿ ಪರಿಶೀಲನೆ: ರೈತರಿಗೆ ಶೀಘ್ರ ಪರಿಹಾರಕ್ಕೆ ಜಿ. ಪರಮೇಶ್ವರ ಸೂಚನೆ
ತುಮಕೂರು, 31 ಮಾರ್ಚ್ (ಹಿ.ಸ.): ಆ್ಯಂಕರ್:ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ತಡಕಲೂರು ಗ್ರಾಮ ವ್ಯಾಪ್ತಿಯಲ್ಲಿ ಅಕಾಲಿಕ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೆ ಉಂಟಾದ ಹಾನಿಯನ್ನು ಗೃಹ ಸಚಿವ ಜಿ. ಪರಮೇಶ್ವರ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಳೆ ಪೀಡಿತ ಪ್ರದೇಶಗಳಲ್
Visit


ತುಮಕೂರು, 31 ಮಾರ್ಚ್ (ಹಿ.ಸ.):

ಆ್ಯಂಕರ್:ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ತಡಕಲೂರು ಗ್ರಾಮ ವ್ಯಾಪ್ತಿಯಲ್ಲಿ ಅಕಾಲಿಕ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೆ ಉಂಟಾದ ಹಾನಿಯನ್ನು ಗೃಹ ಸಚಿವ ಜಿ. ಪರಮೇಶ್ವರ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಳೆ ಪೀಡಿತ ಪ್ರದೇಶಗಳಲ್ಲಿ ಸುತ್ತಾಡಿದ ಅವರು, ದಾಳಿಂಬೆ, ಪಪ್ಪಾಯ, ಅಡಿಕೆ, ರೇಷ್ಮೆ ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಳಿಗೆ ಉಂಟಾದ ಅಪಾರ ನಷ್ಟವನ್ನು ವೀಕ್ಷಿಸಿದರು. ಬೆಳೆ ಹಾನಿಯಿಂದ ಸಂಕಷ್ಟಕ್ಕೀಡಾದ ರೈತರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಧೈರ್ಯ ತುಂಬಿದರು.

ಈ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, “ರೈತರಿಗೆ ತ್ವರಿತಗತಿಯಲ್ಲಿ ಬೆಳೆ ನಷ್ಟ ಪರಿಹಾರ ಒದಗಿಸಲು ಸಮಗ್ರ ಸಮೀಕ್ಷೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಮನದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಬಿ.ವಿ. ಅಶ್ವಿಜ, ಉಪ ವಿಭಾಗಾಧಿಕಾರಿ ಶಿವಪ್ಪ ಸೇರಿದಂತೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande