ಸಾಲ ಶೂಲದ ಹರಿಕಾರ ಸಿದ್ದರಾಮಯ್ಯ: ಅಶೋಕ ವಾಗ್ದಾಳಿ
ಬೆಂಗಳೂರು, 04 ಮಾರ್ಚ್ (ಹಿ.ಸ.): ಆ್ಯಂಕರ್: ರಾಜ್ಯ ಸರ್ಕಾರದ ಸಾಲಭಾರ ಹೆಚ್ಚುತ್ತಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ ಕಿಡಿಕಾರಿದ್ದಾರೆ. “ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥಶಾಸ್ತ್ರಜ್ಞರು ಕರ್ನಾಟಕವನ್ನು ಸಾಲ ರಾಜ
Ashok


ಬೆಂಗಳೂರು, 04 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಜ್ಯ ಸರ್ಕಾರದ ಸಾಲಭಾರ ಹೆಚ್ಚುತ್ತಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ ಕಿಡಿಕಾರಿದ್ದಾರೆ. “ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥಶಾಸ್ತ್ರಜ್ಞರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿ ಸಾಲರಾಮ್ಯರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2025–26ರ ಅಂತ್ಯದ ವೇಳೆಗೆ ರಾಜ್ಯದ ಒಟ್ಟು ಸಾಲದ ಮೊತ್ತ ₹8.14 ಲಕ್ಷ ಕೋಟಿಯಷ್ಟಾಗಲಿದೆ. ಇದು ರಾಜ್ಯದ ಜಿಎಸ್‌ಡಿಪಿಯ ಶೇ.26.5ರಷ್ಟಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಅಂದಾಜಿಸಿರುವುದಾಗಿ ಅಶೋಕ ಉಲ್ಲೇಖಿಸಿದ್ದಾರೆ. ಈ ಅಂಕಿ-ಅಂಶಗಳ ಪ್ರಕಾರ, ರಾಜ್ಯದ 7 ಕೋಟಿ ಜನತೆಗೆ ತಲಾ ₹1,16,258 ಸಾಲದ ಹೊರೆ ಬೀಳಲಿದೆ ಎಂದು ಅವರು ಹೇಳಿದ್ದಾರೆ.

“ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯನವರು ಜಾರಿಗೆ ತಂದ ಅವೈಜ್ಞಾನಿಕ ಗ್ಯಾರೆಂಟಿಗಳು ಹಾಗೂ ಸಾಲು ಸಾಲು ಹಗರಣಗಳು ರಾಜ್ಯದ ಆರ್ಥಿಕ ಶಿಸ್ತನ್ನು ಹಳಿ ತಪ್ಪಿಸಿವೆ. ಸಾಲದ ಸುಳಿಗೆ ಕರುನಾಡು ಸಿಲುಕಿದ್ದು, ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ” ಎಂದು ಅವರು ಟೀಕಿಸಿದ್ದಾರೆ.

“ರಾಜ್ಯದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಕುಸಿದಿರುವಾಗ, ಯಾವ ಮುಖ ಇಟ್ಟುಕೊಂಡು ಇನ್ನೊಂದು ಬಜೆಟ್ ಮಂಡಿಸುತ್ತೀರಿ? ಕನ್ನಡಿಗರ ಕ್ಷಮೆ ಕೇಳಿ, ರಾಜೀನಾಮೆ ನೀಡಿ ಕರ್ನಾಟಕವನ್ನು ಉಳಿಸಿ” ಎಂದು ಮುಖ್ಯಮಂತ್ರಿ ಅವರಿಗೆ ಅಶೋಕ ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande