ಶ್ರೀ ಯೋಗಿನಾರೇಯಣ ಜಯಂತಿ ಆಚರಣೆ
ಗದಗ, 04 ಮಾರ್ಚ್ (ಹಿ.ಸ.) ಆ್ಯಂಕರ್:ಗದಗ ಜಿಲ್ಲಾಡಳಿತದ ವತಿಯಿಂದ ಶ್ರೀ ಯೋಗಿನಾರೇಯಣ ಜಯಂತಿಯನ್ನು ಭಕ್ತಿಭಾವ ಮತ್ತು ಸಡಗರದಿಂದ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಭವನದಲ್ಲಿ ಕಾರ್ಯಕ್ರಮ ಜರುಗಿತು.
ಫೋಟೋ


ಗದಗ, 04 ಮಾರ್ಚ್ (ಹಿ.ಸ.)

ಆ್ಯಂಕರ್:ಗದಗ ಜಿಲ್ಲಾಡಳಿತದ ವತಿಯಿಂದ ಶ್ರೀ ಯೋಗಿನಾರೇಯಣ ಜಯಂತಿಯನ್ನು ಭಕ್ತಿಭಾವ ಮತ್ತು ಸಡಗರದಿಂದ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಭವನದಲ್ಲಿ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ದುರಗೇಶ ಕೆ.ಆರ್ ಅವರು ಉದ್ಘಾಟಿಸಿ, ಶ್ರೀ ಯೋಗಿನಾರೇಯಣರ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯೋಗಿನಾರೇಯಣರ ಜೀವನ ಸಾಧನೆ, ಸಮಾಜಮುಖಿ ಚಿಂತನೆ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಇಂದಿನ ಪೀಳಿಗೆ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ರಾಜಕುಮಾರ ಎಸ್. ಸಂಕನೂರ, ಕಲಾವಿದರಾದ ಬಸವರಾಜ, ಈರಣ್ಣ, ಮಂಜುನಾಥ ಚಲವಾದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯೋಗಿನಾರೇಯಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಜೀವನ ಹಾಗೂ ಕೊಡುಗೆಗಳನ್ನು ಸ್ಮರಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande