ಮಾರ್ಚ್ 7ರಂದು ಜಾಗೀರ ವೆಂಕಟಾಪುರದಲ್ಲಿ ಕಿರು ನಾಟಕ ಪ್ರದರ್ಶನ
ರಾಯಚೂರು, 04 ಮಾರ್ಚ್ (ಹಿ.ಸ.): ಆ್ಯಂಕರ್:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಯಚೂರು ಜಿಲ್ಲಾ ವಕೀಲರ ಸಂಘ ಹಾಗೂ ಗ್ರಾಮ ಪಂಚಾಯತ್ ಜಾಗೀರ ವೆಂಕಟಾಪುರ ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಹಾಗೂ ನನಗೂ ಹಕ್ಕಿದೆ ಎಂಬ ಕಿರು ನಾಟಕ ಪ್ರದರ್ಶನವನ್ನು ತಾಲೂಕಿನ ಜಾಗೀರ ವೆಂಕಟಾಪು
ಮಾರ್ಚ್ 7ರಂದು ಜಾಗೀರ ವೆಂಕಟಾಪುರದಲ್ಲಿ ಕಿರು ನಾಟಕ ಪ್ರದರ್ಶನ


ರಾಯಚೂರು, 04 ಮಾರ್ಚ್ (ಹಿ.ಸ.):

ಆ್ಯಂಕರ್:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಯಚೂರು ಜಿಲ್ಲಾ ವಕೀಲರ ಸಂಘ ಹಾಗೂ ಗ್ರಾಮ ಪಂಚಾಯತ್ ಜಾಗೀರ ವೆಂಕಟಾಪುರ ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಹಾಗೂ ನನಗೂ ಹಕ್ಕಿದೆ ಎಂಬ ಕಿರು ನಾಟಕ ಪ್ರದರ್ಶನವನ್ನು ತಾಲೂಕಿನ ಜಾಗೀರ ವೆಂಕಟಾಪುರ ಗ್ರಾಮದಲ್ಲಿ ಮಾರ್ಚ್ 7ರ ಸಂಜೆ 6.30ಕ್ಕೆ ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ

ಮಾರುತಿ ಎಸ್. ಬಾಗಡೆ ಅವರು ಉದ್ಘಾಟನೆ ನೆರವೇರಿಸುವರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ .ಮಹಾವರಕರ್ ಗುಲ್ಜರ್‌ಲಾಲ್, ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ .ಶ್ರೀಕಾಂತ್.ಎಸ್.ವಿ., 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹತ್ತಿಕಾಳ್ ಪ್ರಭು ಸಿದ್ದಪ್ಪ, ಪ್ರಧಾನ ಹಿರಿಯ ವ್ಯವಹಾರ ನ್ಯಾಯಾಧೀಶರಾದ ಸಿದ್ದರಾಮಪ್ಪ ಕಲ್ಯಾಣರಾವ್, ಅಪರ ಹಿರಿಯ ವ್ಯವಹಾರ ನ್ಯಾಯಾಧೀಶರಾದ ಸುದೀನ್ ಕುಮಾರ್ ಡಿ.ಜಿ., 2ನೇ ಹೆಚ್ಚುವರಿ ಹಿರಿಯ ಶ್ರೇಣಿ ವ್ಯವಹಾರ ನ್ಯಾಯಾಧೀಶರಾದ ಶ್ರೀಮತಿ ಶ್ವೇತಾ ಸಿಂಗ್, ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್, 3ನೇ ಅಪರ ಹಿರಿಯ ವ್ಯವಹಾರ ನ್ಯಾಯಾಧೀಶರಾದ ಶ್ರೀಮತಿ ಕೃಪಾ, ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರಾದ ಚನ್ನಬಸಪ್ಪ ಆರ್. ಕೂಡಿ, ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಕಾಶ ಡಂಬಳ, ಜಾಗೀರ್ ವೆಂಕಟಪೂರ್ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಗಳಾದ ಮನ್ಸುರ್, ಪಿಡಿಒ ಲಕ್ಷ್ಮಿ ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande