
ಬೆಂಗಳೂರು, 05 ಮಾರ್ಚ್ (ಹಿ.ಸ.):
ಆ್ಯಂಕರ್:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಡಾ. ಬಾಬು ಜಗಜೀವನ್ ರಾಂ ರವರ 119ನೇ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಪ್ರಯುಕ್ತ ಪರಿಶಿಷ್ಟ ಜಾತಿಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, 2026-27 ನೇ ಸಾಲಿನ ಡಾ. ಬಾಬು ಜಗಜೀವನ್ ರಾಂ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಿಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 10 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ .21/1, 1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-560 027 ಅಥವಾ ದೂರವಾಣಿ ಸಂಖ್ಯೆ : 080-22240449 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa