
ಬೆಂಗಳೂರು, 05 ಮಾರ್ಚ್ (ಹಿ.ಸ.):
ಆ್ಯಂಕರ್:
ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ವಿಕಾಸಸೌಧದಲ್ಲಿ ಇಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧಿಕಾರಿಗಳ ಸಭೆ ನಡೆಸಿದರು.
ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಸಲ್ಮಾ ಫಾಹಿಮ್, ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ರವಿ ಚನ್ನಣ್ಣವರ್, ಜಂಟಿ ಕಾರ್ಯದರ್ಶಿಗಳಾದ ಶ್ರೀ ಉಮೇಶ್, ಉಪ ಕಾರ್ಮಿಕ ಆಯುಕ್ತರಾದ ಶ್ರೀ ಜಾನ್ಸನ್, ಸಹಾಯಕ ಕಾರ್ಮಿಕ ಆಯುಕ್ತರಾದ ಶ್ರೀ ತಮ್ಮಣ್ಣ ಹಾಗೂ ಇತರೆ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa