ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ
ಬೆಂಗಳೂರು, 05 ಮಾರ್ಚ್ (ಹಿ.ಸ.): ಆ್ಯಂಕರ್: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಮಾರ್ಚ್ 24 ರಿಂದ 26 ರ ವರೆಗೆ ಪ್ರಕೃತಿಯ ಔಷಧಾಲಯವನ್ನು ಅನ್ವೇಷಿಸುವುದು: ಆರೋಗ್ಯ, ಜೀವನೋಪಾಯ, ಜೈವಿಕ ಆರ್ಥಿಕತೆ ಮತ್ತು ಸಂರಕ್ಷಣೆಗಾಗಿ ಔಷಧೀಯ ಮತ್ತು ಸುಗಂಧಭರಿತ ಸಸ್ಯಗಳ ಸಾಮರ್ಥ್ಯ
ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ


ಬೆಂಗಳೂರು, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಮಾರ್ಚ್ 24 ರಿಂದ 26 ರ ವರೆಗೆ ಪ್ರಕೃತಿಯ ಔಷಧಾಲಯವನ್ನು ಅನ್ವೇಷಿಸುವುದು: ಆರೋಗ್ಯ, ಜೀವನೋಪಾಯ, ಜೈವಿಕ ಆರ್ಥಿಕತೆ ಮತ್ತು ಸಂರಕ್ಷಣೆಗಾಗಿ ಔಷಧೀಯ ಮತ್ತು ಸುಗಂಧಭರಿತ ಸಸ್ಯಗಳ ಸಾಮರ್ಥ್ಯಗಳು

ಕುರಿತು ಮೂರು ದಿನಗಳ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ. ಯು.ಆರ್ ರಾವ್ ವಿಜ್ಞಾನ ಭವನ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ದೊಡ್ಡ ಬೆಟ್ಟಹಳ್ಳಿ ಲೇಯೊಟ್, ವಿದ್ಯಾರಣ್ಯಪುರ, ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಯುವ ಉದ್ಯಮದಾರರು ಭಾಗವಹಿಸಬಹುದು. ಅಲ್ಲದೇ , ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧವನ್ನು ಸಹ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಸಂಶೋಧನಾ ಪ್ರಬಂಧಕ್ಕೆ ನಗದು ಬಹುಮಾನವನ್ನು ನೀಡಲಾಗುವುದು. ಆಸಕ್ತರು ಮಾರ್ಚ್ 20 ರೊಳಗಾಗಿ ನೋಂದಣಿ ಲಿಂಕ್: https://forms.gle/xn1ek2pwuBTXmNyz7) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಜಾಲತಾಣ : https://kstacademy.in ಅಥವಾ ಮೊಬೈಲ್‍ ಸಂಖ್ಯೆ: 9620767819/ 9743084194 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande