
ದಾವಣಗೆರೆ, 05 ಮಾರ್ಚ್ (ಹಿ.ಸ.):
ಆ್ಯಂಕರ್:ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ದೊಗ್ಗಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುಮಾರು ₹65 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಮಹತ್ವದ ಯೋಜನೆ ಜಾರಿಗೊಳ್ಳುತ್ತಿದೆ ಎಂದರು.
ಈ ಆರೋಗ್ಯ ಮಂದಿರ ನಿರ್ಮಾಣದಿಂದ ಸ್ಥಳೀಯ ಗ್ರಾಮಸ್ಥರಿಗೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೌಲಭ್ಯಗಳು ಲಭ್ಯವಾಗಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa