
ವಿಜಯಪುರ, 06 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಾಬಾನಗರದಲ್ಲಿ 0.67 ಟಿಎಂಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯಡಿಯಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗುವುದು ಎಂದು ಸಿಎಮ್ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಬರದ ನಾಡು ಏಂದೇ ಕುಖ್ಯಾತಿ ಪಡೆದಿದ್ದ ವಿಜಯಪುರ ಜಿಲ್ಲೆಯನ್ನು ಹಸಿರು ನಾಡನ್ನಾಗಿ ಮಾಡಲು ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಟೊಂಕ ಕಟ್ಟಿ ನಿಂತಿದ್ದಾರೆ.
ಅದರ ಮುಂದುವರೆದ ಭಾಗವಾಗಿ ಸಿಎಮ್ ಗೆ ಮನವಿ ನಾಡುವ ಮೂಲಕ ಜಿಲ್ಲೆಗೆ ನೀರಾವರಿ ಅಭಿವೃದ್ಧಿ ಯೋಜನೆಗಳನ್ನು ಜಿಲ್ಲೆಗೆ ತಂದಿದ್ದು ಜಿಲ್ಲೆ ಜನರ ಸ್ವಾಗತಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande