ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ:ಸಿದ್ದರಾಮಯ್ಯ
ಬೆಂಗಳೂರು, 06 ಮಾರ್ಚ್ (ಹಿ.ಸ.): ಆ್ಯಂಕರ್: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರವು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದರೂ, ಕೇಂದ್ರ ಸರ್ಕಾರವು ಒಕ್ಕೂಟ ತತ್ವದ ಸಾಂವಿಧಾನಿಕ ನಿಯಮಗಳನ್ನೂ ಪಾಲಿಸದೆ ರಾಜ್ಯಕ್ಕೆ ನಿರಂತರ ಅನ್ಯಾಯವೆಸಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲ
Cm


ಬೆಂಗಳೂರು, 06 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರವು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದರೂ, ಕೇಂದ್ರ ಸರ್ಕಾರವು ಒಕ್ಕೂಟ ತತ್ವದ ಸಾಂವಿಧಾನಿಕ ನಿಯಮಗಳನ್ನೂ ಪಾಲಿಸದೆ ರಾಜ್ಯಕ್ಕೆ ನಿರಂತರ ಅನ್ಯಾಯವೆಸಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಆರೋಪಿಸಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ತನ್ನ ಪಾಲಿನ ಕಡಿತ, ಕೇಂದ್ರದ ಯೋಜನೆಗಳಲ್ಲಿ ತಾರತಮ್ಯ, 15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ, ಅದೇ ಆಯೋಗವು ಮಾಡಿದ್ದ ವಿಶೇಷ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಅನುಷ್ಠಾನ ಮಾಡದ ಕಾರಣ ಉಂಟಾದ ಆರ್ಥಿಕ ನಷ್ಟ ಮತ್ತು ಜಿಎಸ್ಟಿ ದರಗಳನ್ನು ತರ್ಕಬದ್ಧಗೊಳಿಸುವ ಅಕಾಲಿಕ ನಿರ್ಧಾರದಿಂದ ರಾಜ್ಯದ ಬೊಕ್ಕಸದ ಮೇಲೆ ಬಿದ್ದ ಹೆಚ್ಚುವರಿ ಹೊರೆ ಹಾಗೂ ಒತ್ತಡಗಳನ್ನು ನಿಭಾಯಿಸುವುದು ಸವಾಲಿನ ಕೆಲಸವಾಗಿದೆ ಎಂದಿದ್ದಾರೆ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರವು ವ್ಯವಸ್ಥಿತವಾಗಿ ದುರ್ಬಲಗೊಳಿಸಿರುವುದರಿಂದ ಜನರ ಉದ್ಯೋಗದ ಹಕ್ಕುಗಳು ಮೊಟಕಾಗಲಿವೆ ಮತ್ತು ರಾಜ್ಯಗಳ ಆರ್ಥಿಕ ಹೊರೆ ಇನ್ನಷ್ಟು ಹೆಚ್ಚಲಿದೆ. ಈ ಕಾರಣಗಳಿಂದ ರಾಜ್ಯದ ಹಿತಾಸಕ್ತಿಗಾಗಿ ಪಕ್ಷಾತೀತವಾಗಿ ಎಲ್ಲರೂ ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲೇಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande