ಇತ್ತೀಚಿನ ವಾಣಿಜ್ಯ ಒಪ್ಪಂದ ರಾಜ್ಯದ ಆರ್ಥಿಕತೆ ಮೇಲೆ ಪರಿಣಾಮ: ಸಿದ್ದರಾಮಯ್ಯ
ಬೆಂಗಳೂರು, 06 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತದಲ್ಲಿ ಜಾಗತಿಕವಾಗಿ ಸಮೀಕೃತವಾಗಿರುವ ರಾಜ್ಯ ಆರ್ಥಿಕತೆಗಳಲ್ಲಿ ಕರ್ನಾಟಕವು ಒಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ಮಾಹಿತಿ ತಂತ್ರಜ್ಞಾನ ಮತ್ತು ಐಟಿ ಸಂಬಂಧಿತ ಸೇವೆಗಳು, ಜೈವಿಕ ತಂತ್ರಜ್ಞಾನ, ಏರೋಸ್ಪೇಸ್
Cm


ಬೆಂಗಳೂರು, 06 ಮಾರ್ಚ್ (ಹಿ.ಸ.):

ಆ್ಯಂಕರ್:

ಭಾರತದಲ್ಲಿ ಜಾಗತಿಕವಾಗಿ ಸಮೀಕೃತವಾಗಿರುವ ರಾಜ್ಯ ಆರ್ಥಿಕತೆಗಳಲ್ಲಿ ಕರ್ನಾಟಕವು ಒಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

ಮಾಹಿತಿ ತಂತ್ರಜ್ಞಾನ ಮತ್ತು ಐಟಿ ಸಂಬಂಧಿತ ಸೇವೆಗಳು, ಜೈವಿಕ ತಂತ್ರಜ್ಞಾನ, ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದ ಉತ್ಪಾದನೆ, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ವಿನ್ಯಾಸ, ಸ್ಟಾರ್ಟ್-ಅಪ್ ಮತ್ತು ಮುಂದುವರಿದ ಉತ್ಪಾದನೆಯಲ್ಲಿ ನಮ್ಮ ರಾಜ್ಯದ ನಾಯಕತ್ವವು ಭಾರತದ ರಫ್ತು ಕ್ಷೇತ್ರ ಮತ್ತು ವಿದೇಶಿ ನೇರ ಹೂಡಿಕೆಯ ಒಳಹರಿವುಗಳಿಗೆ ಪ್ರಮುಖ ಕೊಡುಗೆದಾರರನ್ನಾಗಿ ಮಾಡಿದೆ.

ಆದರೆ, ವಿದೇಶಿ ವಿನಿಮಯಗಳಲ್ಲಿ ಇತ್ತೀಚಿಗೆ ಪ್ರಸ್ತಾಪಿಸಲಾಗಿರುವ ಸುಂಕ ಕ್ರಮಗಳು ಮತ್ತು ಅಮೇರಿಕ ಸೇರಿದಂತೆ ಇತರ ಪ್ರಮುಖ ದೇಶಗಳೊಂದಿಗೆ ವಾಣಿಜ್ಯ ಒಪ್ಪಂದವು ನಮ್ಮ ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ.

ಕರ್ನಾಟಕದಂತಹ ಜಾಗತಿಕವಾಗಿ ಸಮೀಕೃತ ರಾಜ್ಯಗಳ ಹಿತಾಸಕ್ತಿಗಳನ್ನು ವ್ಯಾಪಾರ ನೀತಿ ರೂಪಿಸುವಲ್ಲಿ ಪರಿಗಣಿಸುವುದು ಅಷ್ಟೇ ಮುಖ್ಯವಾಗುತ್ತದೆ. ಸಹಕಾರಿ ಒಕ್ಕೂಟದ ನಿಜಾರ್ಥದಲ್ಲಿ, ಕೇಂದ್ರ ಮತ್ತು ರಾಜ್ಯಗಳ ನಡುವಿನ ಒಡನಾಟವು, ದೇಶದ ವಿದೇಶಿ ವ್ಯವಹಾರಗಳನ್ನು ಬಲಪಡಿಸುವುದರ ಜೊತೆಗೆ ಪ್ರಾದೇಶಿಕ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ದೇಶದ ಆರ್ಥಿಕ ಅಭಿವೃದ್ಧಿಗೆ ರಾಜ್ಯವು ಸದಾ ಸಕ್ರಿಯವಾಗಿ ಕೊಡುಗೆ ನೀಡುತ್ತಿದ್ದು, ಕೇಂದ್ರ ಸರ್ಕಾರದೊಂದಿಗೆ ಈ ಸಹಕಾರವನ್ನು ಮುಂದುವರೆಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande