
ಬೆಂಗಳೂರು, 06 ಮಾರ್ಚ್ (ಹಿ.ಸ.):
ಆ್ಯಂಕರ್:
ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಆದ್ಯತೆ ನೀಡಿದ್ದೇವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ. ಉದ್ಯೋಗ ನೇಮಕಾತಿಗಳಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಪರಿಗಣಿಸಿ ವಯೋಮಿತಿಯಲ್ಲಿ ಒಂದು ಬಾರಿಗೆ ಐದು ವರ್ಷಗಳ ಸಡಿಲಿಕೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ
ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa