
ನವದೆಹಲಿ, 07 ಮಾರ್ಚ್ (ಹಿ.ಸ.):
ಆ್ಯಂಕರ್:
ಜನ ಔಷಧಿ ದಿವಸ್ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಯೋಜನೆಯ ಮುಖ್ಯ ಉದ್ದೇಶ ಪ್ರತಿಯೊಬ್ಬ ನಾಗರಿಕರಿಗೂ ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಒದಗಿಸುವುದಾಗಿದೆ ಎಂದು ಹೇಳಿದರು.
ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಜನೌಷಧಿ ದಿವಸದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯಿಂದ ಪ್ರಯೋಜನ ಪಡೆದ ಎಲ್ಲರಿಗೂ ಹಾರ್ದಿಕ ಶುಭಾಶಯಗಳು. ಈ ಉಪಕ್ರಮವು ಪ್ರತಿಯೊಬ್ಬ ನಾಗರಿಕರಿಗೂ ಕೈಗೆಟುಕುವ ಮತ್ತು ಗುಣಮಟ್ಟದ ಔಷಧಿಗಳನ್ನು ಒದಗಿಸುವ ಸರ್ಕಾರದ ಬದ್ಧತೆಗೆ ಸಾಕ್ಷಿಯಾಗಿದೆ” ಎಂದು ತಿಳಿಸಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿ ನೀಡಿದ ಮಾಹಿತಿಯಂತೆ, ಜನೌಷಧಿ ಕೇಂದ್ರಗಳ ಮೂಲಕ ದೇಶಾದ್ಯಂತ ಲಕ್ಷಾಂತರ ಕುಟುಂಬಗಳು ಆರೋಗ್ಯ ಸೇವೆಯ ವೆಚ್ಚವನ್ನು ಉಳಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುತ್ತಿವೆ. ಈ ಯೋಜನೆಯು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯನ್ನು ತಂದಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa