ಪಶ್ಚಿಮ ಏಷ್ಯಾ ಉದ್ವಿಗ್ನತೆ ಪರಿಣಾಮ: ಎಲ್ಪಿಜಿ ಸಿಲಿಂಡರ್ ದರ ಏರಿಕೆ
ನವದೆಹಲಿ, 07 ಮಾರ್ಚ್ (ಹಿ.ಸ.): ಆ್ಯಂಕರ್:ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಮಿಲಿಟರಿ ಉದ್ವಿಗ್ನತೆ ಮತ್ತು ಇಂಧನ ಪೂರೈಕೆಯ ಅಡಚಣೆಯ ಹಿನ್ನೆಲೆ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ದರವನ್ನು ಹೆಚ್ಚಿಸಲಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ₹60 ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ₹114.50 ರಷ್ಟು
Lpg


ನವದೆಹಲಿ, 07 ಮಾರ್ಚ್ (ಹಿ.ಸ.):

ಆ್ಯಂಕರ್:ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಮಿಲಿಟರಿ ಉದ್ವಿಗ್ನತೆ ಮತ್ತು ಇಂಧನ ಪೂರೈಕೆಯ ಅಡಚಣೆಯ ಹಿನ್ನೆಲೆ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ದರವನ್ನು ಹೆಚ್ಚಿಸಲಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ₹60 ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ₹114.50 ರಷ್ಟು ಏರಿಕೆಯಾಗಿದ್ದು, ಹೊಸ ದರಗಳು ಶನಿವಾರದಿಂದ ಜಾರಿಗೆ ಬಂದಿವೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ನೀಡಿದ ಮಾಹಿತಿಯಂತೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕಿಲೋಗ್ರಾಂ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ₹853ರಿಂದ ₹913ಕ್ಕೆ ಏರಿಕೆಯಾಗಿದೆ. ಕಳೆದ 11 ತಿಂಗಳಲ್ಲಿ ಇದು ಎರಡನೇ ಬಾರಿ ಏರಿಕೆಯಾಗಿದೆ. ಇದಕ್ಕೂ ಮೊದಲು 2025ರ ಏಪ್ರಿಲ್ 8ರಂದು ₹50 ಹೆಚ್ಚಿಸಲಾಗಿತ್ತು.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಜಾಗತಿಕ ಇಂಧನ ಮಾರುಕಟ್ಟೆಯ ಏರಿಕೆಯಿಂದಾಗಿ ದರ ಏರಿಕೆಯಾಗಿದೆ. ವಿಶೇಷವಾಗಿ ಹೊರ್ಮಜ್ ಜಲಸಂಧಿ ಮೂಲಕ ಆಮದು ಮಾಡಿಕೊಳ್ಳುವ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಪೂರೈಕೆಯಲ್ಲಿ ಉಂಟಾದ ಅಡಚಣೆಗಳು ಇದರ ಪ್ರಮುಖ ಕಾರಣವೆಂದು ಹೇಳಲಾಗಿದೆ.

ಇನ್ನೂ ಹೋಟೆಲ್‌ಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಬಳಸುವ 19 ಕಿಲೋಗ್ರಾಂಗಳ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹114.50 ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ಇದರ ದರ ₹1,883ಕ್ಕೆ ತಲುಪಿದೆ.

ಆದರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ಮುಂದುವರಿಯಲಿದೆ. ಈ ಯೋಜನೆಯಡಿ ಉಚಿತ ಎಲ್‌ಪಿಜಿ ಸಂಪರ್ಕ ಪಡೆದ 10 ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ವರ್ಷಕ್ಕೆ 12 ಸಿಲಿಂಡರ್‌ಗಳವರೆಗೆ ಪ್ರತಿ ಸಿಲಿಂಡರ್‌ಗೆ ₹300 ಸಬ್ಸಿಡಿ ದೊರೆಯಲಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande