ಬಿಜೆಪಿ–ಚುನಾವಣಾ ಆಯೋಗ ವಿರುದ್ಧ ಮಮತಾ ಬ್ಯಾನರ್ಜಿ ಧರಣಿ ಮುಂದುವರಿಕೆ
ಕೋಲ್ಕತ್ತಾ, 07 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತದಾರರ ಪಟ್ಟಿ ಪರಿಷ್ಕರಣೆ ವಿವಾದದ ಹಿನ್ನೆಲೆಯಲ್ಲಿ ಸತತ ಎರಡನೇ ದಿನವೂ ಧರಣಿ ನಡೆಸಿ ಬಿಜೆಪಿ ಹಾಗೂ ಚುನಾವಣಾ ಆಯೋಗವನ್ನು ತೀವ್ರವಾಗಿ ಟೀಕಿಸಿದ್ದಾರೆ. ಕೋಲ್ಕತ್ತಾದ ಧರ್ಮತಾಲಾ ಪ್ರದೇಶದಲ್ಲಿ ನಡೆಯ
Mamta  protest


ಕೋಲ್ಕತ್ತಾ, 07 ಮಾರ್ಚ್ (ಹಿ.ಸ.):

ಆ್ಯಂಕರ್:

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತದಾರರ ಪಟ್ಟಿ ಪರಿಷ್ಕರಣೆ ವಿವಾದದ ಹಿನ್ನೆಲೆಯಲ್ಲಿ ಸತತ ಎರಡನೇ ದಿನವೂ ಧರಣಿ ನಡೆಸಿ ಬಿಜೆಪಿ ಹಾಗೂ ಚುನಾವಣಾ ಆಯೋಗವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಕೋಲ್ಕತ್ತಾದ ಧರ್ಮತಾಲಾ ಪ್ರದೇಶದಲ್ಲಿ ನಡೆಯುತ್ತಿರುವ ಈ ಧರಣಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ರಾಜ್ಯದ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಜೆಪಿ ಮತ್ತು ಚುನಾವಣಾ ಆಯೋಗ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು 2026ರ ವಿಧಾನಸಭಾ ಚುನಾವಣೆಗೆ ಮುನ್ನ ಆತುರ ಮತ್ತು ಅಸ್ತವ್ಯಸ್ತವಾಗಿ ನಡೆಸಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ನಡೆಯುತ್ತಿರುವ ಈ ಧರಣಿಯಲ್ಲಿ ಅನೇಕ ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕರು, ಬುದ್ಧಿಜೀವಿಗಳು, ಕಲಾವಿದರು ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ ಬ್ಯಾನರ್ಜಿ ಮಾತನಾಡಿ, ಮತದಾರರ ಪಟ್ಟಿಯಿಂದ ದೊಡ್ಡ ಸಂಖ್ಯೆಯ ಹೆಸರುಗಳನ್ನು ತೆಗೆದುಹಾಕಲು ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಅಂತಿಮ ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಅಳಿಸುವ ಸಾಧ್ಯತೆ ಇದ್ದು, ಹಲವಾರು ಮತದಾರರನ್ನು ‘ಬಾಕಿ ಇರುವ ವರ್ಗ’ದಲ್ಲಿ ಇರಿಸಿರುವುದರಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರ ಭಾಗವಹಿಸುವಿಕೆ ಬಗ್ಗೆ ಅನಿಶ್ಚಿತತೆ ಉಂಟಾಗಿದೆ ಎಂದು ಅವರು ಹೇಳಿದರು.

ಈ ವಿಷಯದಲ್ಲಿ ಚುನಾವಣಾ ಆಯೋಗವು ಪಾರದರ್ಶಕತೆ ಕಾಪಾಡಬೇಕು ಹಾಗೂ ಮತದಾರರ ಹಕ್ಕುಗಳನ್ನು ರಕ್ಷಿಸಬೇಕು ಎಂದು ತೃಣಮೂಲ ಕಾಂಗ್ರೆಸ್ ಆಗ್ರಹಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande