
ಬೆಂಗಳೂರು, 07 ಮಾರ್ಚ್ (ಹಿ.ಸ.):
ಆ್ಯಂಕರ್:
ನಾಡಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಮ ಸಮಾಜ ನಿರ್ಮಾಣಕ್ಕಾಗಿ ಕರ್ನಾಟಕದ ಇತಿಹಾಸದಲ್ಲೇ ದಾಖಲೆಯ 17 ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಕರ್ನಾಟಕ ವಿಧಾನ ಪರಿಷತ್ ನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ರವರು ಇಂದು ಭೇಟಿ ಮಾಡಿ ಅಭಿನಂದಿಸಿದರು.
ಈ ವೇಳೆ ಕಿತ್ತೂರು ಕರ್ನಾಟಕದ ಬಹುದಿನಗಳ ಕನಸಾಗಿದ್ದ ಹುಬ್ಬಳ್ಳಿಯ ಹಜ್ ಭವನವನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ ಮುಖ್ಯಮಂತ್ರಿಗಳಿಗೆ ಸಲೀಂ ಅಹ್ಮದ್ ರವರು ಧನ್ಯವಾದ ಸಲ್ಲಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa