
ಕೋಲಾರ, ೦೮ ಮಾರ್ಚ್ (ಹಿ.ಸ) :
ಆ್ಯಂಕರ್:ಬಿಹಾರ ರಾಜ್ಯದ ಮುಖ್ಯಮಂತ್ರಿ ಹಾಗೂ ಜೆಡಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಭಾನುವಾರ ಬಿಹಾರ ರಾಜ್ಯ ಜೆಡಿಯು ಪಕ್ಷದ ಕೇಂದ್ರ ಕಚೇರಿಯಲ್ಲಿ ಅಧಿಕೃತವಾಗಿ ಸದಸ್ಯತ್ವ ಪಡೆಯುವ ಮೂಲಕ ಪಕ್ಷ ಸೇರ್ಪಡೆಯನ್ನು ಜೆಡಿಯು ಯುವ ಘಟಕದ ರಾಜ್ಯ ಅಧ್ಯಕ್ಷ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಕಲ್ಲಂಡೂರು ಡಾ.ಕೆ ನಾಗರಾಜ್ ಸ್ವಾಗತಿಸಿದ್ದಾರೆ.
ಮುಂದಿನ ದಿನಗಳಲ್ಲಿ ಯುವ ನಾಯಕ ನಿಶಾಂತ್ ಕುಮಾರ್ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯುವ ಜನತೆಗೆ ಶಕ್ತಿ ತುಂಬಲಿದ್ದಾರೆ. ಜೆಡಿಯು ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಸೇರಿದಂತೆ ಇತರೆ ಮುಖಂಡರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಸರ್ವತೋಮುಖ ಬೆಳವಣಿಗೆಗೆ ನಿಶಾಂತ್ ಕುಮಾರ್ ಅವರ ಜೊತೆಯಲ್ಲಿ ದೇಶಾದ್ಯಂತ ಜೆಡಿಯು ಪಕ್ಷವನ್ನು ಸಂಘಟಿಸಲು ಪಕ್ಷದ ಎಲ್ಲಾ ಮುಖಂಡರು ಪಟ್ನಾ ದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ರವರ ನಾಯಕತ್ವದಲ್ಲಿ ಪಣ ತೊಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್