ಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕಾಗಿ ಅರ್ಜಿ ಆಹ್ವಾನ
ಧಾರವಾಡ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕಾಗಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಧಾರವಾಡ, ಗದಗ, ಹಾವೇರಿ, ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶ, ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ ಯೋಧ
ಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕಾಗಿ ಅರ್ಜಿ ಆಹ್ವಾನ


ಧಾರವಾಡ, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕಾಗಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಧಾರವಾಡ, ಗದಗ, ಹಾವೇರಿ, ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮಾಂತರ ಪ್ರದೇಶ, ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅರ್ಜಿ ನಮೂನೆಗಳನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಿಂದ ಪಡೆದು, ಮೇ 5, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5 ನೇ ತರಗತಿಯಿಂದ ಪಿಯುಸಿ-2 ರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ವಸತಿ ನಿಲಯದಲ್ಲಿ ವಾಸ್ತವ್ಯ ಮತ್ತು ಊಟೋಪಚಾರಗಳು ಉಚಿತವಾಗಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ ಪಡೆಯಬಹುದಾಗಿರುತ್ತದೆ. ವಸತಿ ನಿಲಯದಲ್ಲಿ ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ನಿಲಯದಲ್ಲಿ ಪ್ರವೇಶ ನೀಡಲಾಗುವದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2440176 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande