
ಬಾಗಲಕೋಟೆ, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹಿರಿಯ ನಾಗರಿಕರ ಸುರಕ್ಷತೆ, ಆರೈಕೆ ಹಾಗೂ ತ್ವರಿತ ಸಹಾಯವನ್ನು ಖಚಿತಪಡಿಸುವ ಉದ್ದೇಶದಿಂದ ‘ಆಸರೆ’ ಎಂಬ ಸಮುದಾಯ ಪೊಲೀಸ್ ಕಾರ್ಯಕ್ರಮವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ.
ಈ ಉಪಕ್ರಮದಡಿ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಪೊಲೀಸ್ ಸಿಬ್ಬಂದಿಗಳು, ಹಿರಿಯ ನಾಗರಿಕರೊಂದಿಗೆ ಸ್ನೇಹಪರ ಹಾಗೂ ಆತ್ಮೀಯ ಸಂವಹನ ನಡೆಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಸಹಾಯ ಒದಗಿಸುವುದರ ಜೊತೆಗೆ ಭದ್ರತೆ ಮತ್ತು ಸುರಕ್ಷತೆಯ ಭಾವನೆ ಮೂಡಿಸುವ ಕೆಲಸ ಮಾಡಲಾಗುತ್ತಿದೆ.
ಹಿರಿಯ ನಾಗರಿಕರ ಕಲ್ಯಾಣವೇ ಸಮಾಜದ ಪ್ರಮುಖ ಜವಾಬ್ದಾರಿಯಾಗಿದೆ ಎಂಬ ಸಂದೇಶದೊಂದಿಗೆ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.
ಹಿರಿಯರ ಸೇವೆ ನಮ್ಮ ಆದ್ಯ ಕರ್ತವ್ಯವಾಗಿದ್ದು, ಅವರ ಸುರಕ್ಷತೆಗೆ ಸದಾ ಬದ್ಧರಾಗಿದ್ದೇವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa