ಚಿತ್ತಾಪುರದಲ್ಲಿ ಭೋಜಲಿಂಗೇಶ್ವರ ದೇವಸ್ಥಾನ ಲೋಕಾರ್ಪಣೆ
ಕಲಬುರಗಿ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ಶ್ರೀ ಭೋಜಲಿಂಗೇಶ್ವರ ನೂತನ ದೇವಸ್ಥಾನದ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿದರು. ಕಾರ್ಯಕ್ರಮದ ಅಂಗವಾಗಿ ನೂತನ ಬೆಳ್ಳಿ ರಥೋತ್ಸವಕ್ಕೆ ಚಾಲನೆ ನೀಡಿ,
Cm


ಕಲಬುರಗಿ, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ಶ್ರೀ ಭೋಜಲಿಂಗೇಶ್ವರ ನೂತನ ದೇವಸ್ಥಾನದ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿದರು.

ಕಾರ್ಯಕ್ರಮದ ಅಂಗವಾಗಿ ನೂತನ ಬೆಳ್ಳಿ ರಥೋತ್ಸವಕ್ಕೆ ಚಾಲನೆ ನೀಡಿ, ಕಲ್ಯಾಣ ಮಂಟಪವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸುವಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಸಚ್ಚಿದಾನಂದ, ನಿತ್ಯ ನಿರಂಜನ ಮೂರ್ತಿ, ಸ್ವಯಂ ಸಿದ್ಧ ಶರಣರ ಸಿದ್ಧ ಸಂಸ್ಥಾನ ಮಠದ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲ್ಪಟ್ಟಿದ್ದು, ಭಕ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಹಿರಗಪ್ಪ ತಾತ ಸೇರಿದಂತೆ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಡಾ. ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande