
ಹಾವೇರಿ, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರೈತರ ಅಭಿವೃದ್ಧಿಯೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಹಾವೇರಿಯಲ್ಲಿ ಇಂದು ಕೃಷಿ ಮತ್ತು ನೀರಾವರಿ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ರೈತ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು, ರೈತರ ಹಿತದೃಷ್ಟಿಯಿಂದ ಹಲವು ಮಹತ್ವದ ಅಂಶಗಳ ಮೇಲೆ ಗಮನ ಹರಿಸಲಾಯಿತು ಎಂದು ತಿಳಿಸಿದರು.
ನೀರಾವರಿ ಯೋಜನೆಗಳ ಕುರಿತು ಮಾತನಾಡಿದ ಸಚಿವರು, ರಾಜ್ಯದ ಬಾಕಿ ಉಳಿದಿರುವ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಪ್ರತಿಯೊಂದು ಜಮೀನಿಗೂ ನೀರು ತಲುಪಿಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಅಕ್ರಮ-ಸಕ್ರಮ ಪಂಪ್ ಸೆಟ್ ಸಮಸ್ಯೆಗಳ ಬಗ್ಗೆ ಚರ್ಚಿಸಿ, ರೈತರಿಗೆ ವಿದ್ಯುತ್ ಸಂಪರ್ಕವನ್ನು ಸರಳಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಮುಂಬರುವ ಬಿತ್ತನೆ ಹಂಗಾಮಿನ ಹಿನ್ನೆಲೆಯಲ್ಲಿ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ದಾಸ್ತಾನು ಮತ್ತು ಹಂಚಿಕೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು.
ಅನ್ನದಾತರ ಸಂಕಷ್ಟಗಳಿಗೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ರೈತರ ಸರ್ವತೋಮುಖ ಅಭಿವೃದ್ಧಿಗೆ ಸದಾ ಬದ್ಧರಾಗಿದ್ದೇವೆ ಎಂದು ಸಚಿವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa