ಏಪ್ರೀಲ್ 16 ರಂದು ಅಲ್ಪಸಂಖ್ಯಾತರ ಕುಂದುಕೊರತೆ ಸಭೆ
ಧಾರವಾಡ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ಏಪ್ರೀಲ್ 16, 2026 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಧಾರವಾಡದ ಅಂಜುಮನ್-ಎ-ಇಸ್ಲಾಂ ಸಭಾಭವನದಲ್ಲಿ ಸ್ಥಳೀಯ ಅಲ್ಪಸಂಖ್ಯಾತರ ಕುಂದುಕೊರತೆ ಸಭೆಯನ್ನು ಜರುಗಿಸುವರು. ಸದರಿ ಸಭೆಗೆ ಹೆಚ್ಚಿನ
ಏಪ್ರೀಲ್ 16 ರಂದು ಅಲ್ಪಸಂಖ್ಯಾತರ ಕುಂದುಕೊರತೆ ಸಭೆ


ಧಾರವಾಡ, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ಏಪ್ರೀಲ್ 16, 2026 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಧಾರವಾಡದ ಅಂಜುಮನ್-ಎ-ಇಸ್ಲಾಂ ಸಭಾಭವನದಲ್ಲಿ ಸ್ಥಳೀಯ ಅಲ್ಪಸಂಖ್ಯಾತರ ಕುಂದುಕೊರತೆ ಸಭೆಯನ್ನು ಜರುಗಿಸುವರು.

ಸದರಿ ಸಭೆಗೆ ಹೆಚ್ಚಿನ ಸಂಖ್ಯೆಯ ಅಲ್ಪಸಂಖ್ಯಾತ ಸಮುದಾಯದವರು ಆಗಮಿಸಿ, ತಮ್ಮ ಕುಂದುಕೊರತೆಗಳ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande