ರಾಜ್ಯದಲ್ಲಿ ಒಣಹವೆ ನಡುವೆ ಕೆಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಇಂದಿನ ಹವಾಮಾನದಲ್ಲಿ ಒಣಹವೆ ಮತ್ತು ಬಿಸಿಲಿನ ತೀವ್ರತೆ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನದ ನಂತರ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗ
ರಾಜ್ಯದಲ್ಲಿ ಒಣಹವೆ ನಡುವೆ ಕೆಲವೆಡೆ ಮಳೆ ಮುನ್ಸೂಚನೆ


ಬೆಂಗಳೂರು, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದಿನ ಹವಾಮಾನದಲ್ಲಿ ಒಣಹವೆ ಮತ್ತು ಬಿಸಿಲಿನ ತೀವ್ರತೆ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನದ ನಂತರ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಗಾಳಿ ಹಾಗೂ ಆರ್ದ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಉಷ್ಣಾಂಶ ಹೆಚ್ಚು ಅನುಭವವಾಗಬಹುದು.

ಇನ್ನು ದಕ್ಷಿಣ ಒಳನಾಡು ಹಾಗೂ ಮಲೆನಾಡು ಪ್ರದೇಶಗಳಾದ ಮೈಸೂರು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಕಡೆ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜನರು ಬಿಸಿಗಾಳಿಯಿಂದ ತಪ್ಪಿಸಿಕೊಳ್ಳಲು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು, ಮತ್ತು ಮಳೆ-ಗುಡುಗು ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಇರಲು ಹವಾಮಾನ ಇಲಾಖೆ ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande