
ಹಾವೇರಿ, 12 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದ ಕುಂಚಿಕೊರವರ ಕಾಲೋನಿಯಲ್ಲಿ ₹25 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಸಿಸಿ ಗಟಾರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭಾಗವಹಿಸಿ, ಅಭಿವೃದ್ಧಿ
ಕಾಮಗಾರಿಗಳಿಗೆ ಚಾಲನೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಈ ಯೋಜನೆಯಿಂದ ಸ್ಥಳೀಯರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಸಿಸಿ ರಸ್ತೆ ಮತ್ತು ಗಟಾರ ನಿರ್ಮಾಣದಿಂದ ಕಾಲೋನಿಯ ಜನರಿಗೆ ಸುಗಮ ಸಂಚಾರ ಮತ್ತು ಸ್ವಚ್ಛತಾ ವ್ಯವಸ್ಥೆ ಸುಧಾರಣೆಯಾಗಲಿದ್ದು, ನಿವಾಸಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa