ಸಮುದಾಯ ಭವನ ಕಾಮಗಾರಿಗೆ ಭೂಮಿ ಪೂಜೆ
ಗದಗ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮದಲ್ಲಿ ಶ್ರೀ ಶಂಭುಲಿಂಗೇಶ್ವರ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಲಾಯಿತು. ಈ ಕಾರ್ಯಕ್ರಮವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ
ಫೋಟೋ


ಗದಗ, 12 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮದಲ್ಲಿ ಶ್ರೀ ಶಂಭುಲಿಂಗೇಶ್ವರ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಲಾಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ್ ಬೊಮ್ಮಾಯಿ ಅವರು ವಿಧಿವಿಧಾನಗಳೊಂದಿಗೆ ನೆರವೇರಿಸಿದರು.

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಸಮುದಾಯ ಭವನಗಳ ನಿರ್ಮಾಣವು ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ. ಇಂತಹ ಮೂಲಸೌಕರ್ಯಗಳು ಗ್ರಾಮಗಳ ಅಭಿವೃದ್ಧಿಗೆ ಸಹಕಾರಿ ಆಗಲಿವೆ ಎಂದು ಹೇಳಿದರು.

ಕಾರ್ಯಕ್ರಮದ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಕಪ್ಪ ಬಂಡಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಇದಕ್ಕೂ ಮೊದಲು ಸಂಸದ ಬಸವರಾಜ ಬೊಮ್ಮಾಯಿ ಅವರು ಇಟಗಿಯ ಇತಿಹಾಸ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು. ನಂತರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ದಂಪತಿಗಳಿಗೆ ಶುಭ ಹಾರೈಸಿದರು.

ಒಟ್ಟಿನಲ್ಲಿ, ಇಟಗಿ ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮಗಳು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ವೇದಿಕೆಯಾಗಿ ಪರಿಣಮಿಸಿ ಗ್ರಾಮಸ್ಥರಲ್ಲಿ ಹರ್ಷದ ವಾತಾವರಣ ನಿರ್ಮಿಸಿತು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande